ಬೆಂಗಳೂರು: ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಿ ಹೋರಾಟಗಾರರನ್ನು ಬಂಧಿಸಿರುವುದನ್ನು ‘ಜಾಗೃತ ನಾಗರಿಕರು, ಕರ್ನಾಟಕ’ ಖಂಡಿಸಿದೆ.

ಕೆ. ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಜಿ ರಾಮಕೃಷ್ಣ, ವಿಜಯಾ, ವಿಮಲಾ.ಕೆ.ಎಸ್., ಬಿ.ಶ್ರೀಪಾದ ಭಟ್, ಟಿ.ಸುರೇಂದ್ರ ರಾವ್, ಮೀನಾಕ್ಷಿ ಬಾಳಿ, ವಸುಂಧರಾ ಭೂಪತಿ, ಎನ್.ಗಾಯತ್ರಿ, ಬಂಜಗೆರೆ ಜಯಪ್ರಕಾಶ್, ಜಾಣಗೆರೆ ವೆಂಕಟರಾಮಯ್ಯ, ಮಾವಳ್ಳಿ ಶಂಕರ್ ಈ ಬಗ್ಗೆ ಹೇಳಿಕೆ ನೀಡಿದ್ದು, ‘ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1,177 ಎಕರೆ ಜಮೀನು ಉಳಿಸಿಕೊಳ್ಳಲು 1,181 ದಿನಗಳಿಂದ ಪ್ರಜಾತಾಂತ್ರಿಕ ಹೋರಾಟ ಮಾಡುತ್ತಿದ್ದರು. ಈ ಹೋರಾಟವನ್ನು ಬೆಂಬಲಿಸಿ ಬುಧವಾರ ರಾಜ್ಯದ ವಿವಿಧೆಡೆಯ ಸಾಮಾಜಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸರ್ಕಾರ ಭೂ ಸ್ವಾಧೀನ ಕೈ ಬಿಡುವವರೆಗೂ ಹೋರಾಟ ಮುಂದುವರಿಸಲು ನಿರ್ಧರಿಸಿದ್ದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಧರಣಿ ಮಾಡಲು ಅವಕಾಶವಿದೆ. ದೇವನಹಳ್ಳಿಯಲ್ಲಿ ಇಲ್ಲ ಎಂಬ ಪೊಲೀಸರ ಹೇಳಿಕೆಯನ್ನು ವಿರೋಧಿಸಿದ ಪ್ರತಿಭಟನಕಾರರನ್ನು ಬಂಧಿಸಲಾಗಿದೆ. ಅವರನ್ನು ಬಿಡುಗಡೆ ಮಾಡಬೇಕು. ಬೇಷರತ್ತಾಗಿ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿಪಿಎಂ ಖಂಡನೆ: ಭೂ ಸ್ವಾಧೀನ ವಿರೋಧಿ ಹೋರಾಟಗಾರರನ್ನು ಬಂಧಿಸಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಖಂಡಿಸಿದೆ. ಜೂನ್ 26ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ರೈತ ವಿರೋಧಿ, ಸಂವಿಧಾನದ ಹಕ್ಕುಗಳ ವಿರೋಧಿ, ಅನ್ನಕ್ಕೆ ತತ್ವಾರ ಮಾಡುವ ಭೂಸ್ವಾಧೀನ ನೀತಿಗಳನ್ನು ಯಾವುದೇ ಕಾರಣಕ್ಕೂ ಮುಂದುವರಿಸಬಾರದು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಪ್ರಕಾಶ್ ಕೆ. ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.