ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕ್ ಪ್ರಜೆಗಳ ಬಂಧನ: 10 ವರ್ಷದ ಹಿಂದೆಯೇ ಭಾರತಕ್ಕೆ ಬಂದಿದ್ದ ನಾಲ್ವರು; ಪರಮೇಶ್ವರ

Published : 30 ಸೆಪ್ಟೆಂಬರ್ 2024, 15:47 IST
Last Updated : 30 ಸೆಪ್ಟೆಂಬರ್ 2024, 15:47 IST
ಫಾಲೋ ಮಾಡಿ
Comments

ಬೆಂಗಳೂರು: ‘ಆನೇಕಲ್‌ ತಾಲ್ಲೂಕಿನ ಜಿಗಣಿಯಲ್ಲಿ ಬಂಧಿಸಿರುವ ಪಾಕಿಸ್ತಾನದ ನಾಲ್ವರು, ಹತ್ತು ವರ್ಷದ ಹಿಂದೆಯೇ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

‘ಜಿಗಣಿ ಪೊಲೀಸರು ಬಂಧಿತರನ್ನು ವಿಚಾರಣೆ ನಡೆಸುತ್ತಿದ್ದಾರೆ. ಯಾವ ಉದ್ದೇಶದಿಂದ ಬೆಂಗಳೂರಿನ ಗ್ರಾಮಾಂತರ ಭಾಗಕ್ಕೆ ಬಂದಿದ್ದರು ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಬಂಧಿತರು ಪಾಸ್‌ಪೋರ್ಟ್ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದರು. ಹೆಸರು ಸಹ ಬದಲಾವಣೆ ಮಾಡಿಕೊಂಡಿದ್ದರು. ತನಿಖೆಯಲ್ಲಿ ಏನೆಲ್ಲ ಮಾಹಿತಿಗಳು ಹೊರಬರುತ್ತವೆ ಎಂಬುದನ್ನು ನೋಡಿ‌, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದರು.

‘ರಾಜ್ಯಕ್ಕೂ ಬಹಳಷ್ಟು ಮಂದಿ ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದು ನೆಲಸಿದ್ದಾರೆ. ಅಕ್ರಮ ವಲಸಿಗರ ವಿರುದ್ಧ ಪ್ರತಿನಿತ್ಯ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಗಮನಕ್ಕೂ ತರಲಾಗುತ್ತಿದೆ. ಆಗಾಗ್ಗೆ ಬಾಂಗ್ಲಾದೇಶದ ರಾಯಭಾರಿ ಕಚೇರಿಗೂ ಮಾಹಿತಿ ನೀಡುತ್ತಿದ್ದೇವೆ’ ಎಂದೂ ಹೇಳಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT