ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಿಫ್ಟ್‌ ಎ ಸ್ಮೈಲ್’ ಶೈಕ್ಷಣಿಕ ಯೋಜನೆಗೆ ಸಹಯೋಗ

Last Updated 4 ಜನವರಿ 2021, 18:46 IST
ಅಕ್ಷರ ಗಾತ್ರ

ಬೆಂಗಳೂರು:ಇಸ್ರೇಲ್‌ನ ದಕ್ಷಿಣ ಭಾರತ ದೂತಾವಾಸ ಸಂಸ್ಥೆಯು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯ ‘ಗಿಫ್ಟ್‌ ಎ ಸ್ಮೈಲ್’ ಶೈಕ್ಷಣಿಕ ಕಾರ್ಯಕ್ರಮದ ಜೊತೆಗೂಡಿ ಕರ್ನಾಟಕ ಮತ್ತು ತಮಿಳುನಾಡಿನ ಅವಕಾಶವಂಚಿತ ಶಾಲಾ ಮಕ್ಕಳ ದೂರಶಿಕ್ಷಣಕ್ಕೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ಮುಂದಾಗಿದೆ.

ಎರಡೂ ರಾಜ್ಯಗಳ ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ನೀಡಲು ಬೋಧನಾ ಸಾಮಗ್ರಿ ಒಳಗೊಂಡಿರುವ 100 ಟ್ಯಾಬ್ಲೆಟ್‌ಗಳನ್ನು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯ ಮೂಲಕ ವಿತರಿಸಲಿದೆ.

‘ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಕಲಿಕೆಯ ವೇಗ ಹೆಚ್ಚಲಿದೆ. ಆನ್‌ಲೈನ್‌ ಮೂಲಕ ದೊರೆಯುವ ಶಿಕ್ಷಣವು ಅವಕಾಶವಂಚಿತ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ’ ಎಂದುಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯ ಶ್ರೀ ಶ್ರೀ ರವಿಶಂಕರ್ ಗುರೂಜಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT