ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆದ ಕಲಾವಿದೆ ಎಂ.ಜೆ. ಕಮಲಾಕ್ಷಿ (82) ನಿಧನರಾಗಿದ್ದಾರೆ.

ಅವರು ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಕ್ರೆಸೆಂಟ್ ರಸ್ತೆಯ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಮಂಗಳವಾರ ಮಧ್ಯಾಹ್ನ 1.30ರ ವೇಳೆಗೆ ಮೃತಪಟ್ಟಿದ್ದಾರೆ. ಮಲ್ಲೇಶ್ವರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 8ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ರಾಷ್ಟ್ರ ಮಟ್ಟದಲ್ಲಿ ಚಿತ್ರಕಲಾ ಪ್ರದರ್ಶನ ನೀಡಿದ್ದ ಅವರು, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪ್ರಾಂಶುಪಾಲರಾಗಿ, ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ, ಖಜಾಂಚಿಯಾಗಿ ಹಾಗೂ ಪ್ರಧಾನ ಕಾರ್ಯರ್ದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಕಲಾ ಕ್ಷೇತ್ರದ ಸಾಧನೆಗೆ ಅವರಿಗೆ ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಜತೆಗೆ ವಿವಿಧ ಸಂಘ–ಸಂಸ್ಥೆಗಳ ಪ್ರಶಸ್ತಿಗಳು ಸಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.