ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ: ಅರವಿಂದ ಲಿಂಬಾವಳಿ

Published : 14 ಮೇ 2023, 16:24 IST
Last Updated : 14 ಮೇ 2023, 16:24 IST
ಫಾಲೋ ಮಾಡಿ
Comments

ಕೆ.ಆರ್.ಪುರ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿದೆ. ನಾಯಕರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ‌ ಎಂದು ಮಾಜಿ ಶಾಸಕ ಅರವಿಂದ ಲಿಂಬಾವಳಿ ಹೇಳಿದರು.

ಶಾಸಕಿ ಮಂಜುಳಾ ಲಿಂಬಾವಳಿ ಅವರಿಗೆ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಫಲಿತಾಂಶದಿಂದ ಬಿಜೆಪಿಗೆ ಆಘಾತವಾಗಿದೆ. ಪಕ್ಷದ ಸಂಘಟನೆ ಹಾಗೂ ಸರ್ಕಾರ ನಡೆಸಿದವರು ಅತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಹಿರಿಯರ ಕಡೆಗಣನೆ, ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ಧೋರಣೆ ಸೋಲಿಗೆ ಕಾರಣವಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ಅಧ್ಯಕ್ಷ ಮನೋಹರ್ ರೆಡ್ಡಿ, ನಟರಾಜ್, ಪ್ರಧಾನ ಕಾರ್ಯದರ್ಶಿಗಳಾದ ಹೂಡಿ ಪಿಳ್ಳಪ್ಪ, ರಾಜೇಶ್, ಮುಖಂಡರಾದ ರಾಜಾರೆಡ್ಡಿ, ಹೂಡಿ ಮಂಜುನಾಥ್, ಬಿದರಹಳ್ಳಿ ರಾಜೇಶ್, ಅನಂದ್ ಕುಮಾರ್ (ಕಿಟ್ಟಿ), ಕೆ.ವಿ.ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT