ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಯವೈಶ್ಯ ನಿಗಮ: ಅನುದಾನ ಹೆಚ್ಚಿಸಿ: ಟಿ.ಎ.ಶರವಣ

Last Updated 19 ನವೆಂಬರ್ 2020, 21:04 IST
ಅಕ್ಷರ ಗಾತ್ರ

ಬೆಂಗಳೂರು: ಆರ್ಯವೈಶ್ಯ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ನೀಡುವ ಅನುದಾನವನ್ನು ₹25 ಕೋಟಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್‌ ಮುಖಂಡ ಟಿ.ಎ.ಶರವಣ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.

‘ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ಆರ್ಯವೈಶ್ಯ ಜನಾಂಗವು ಹಿಂದಿನಿಂದಲೂ ಶೋಷಣೆಗೊಳಗಾಗುತ್ತಿದೆ. ಈ ಜನಾಂಗದವರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಬಹಳ ವರ್ಷಗಳಿಂದ ಹೋರಾಟ ನಡೆದಿದೆ. ಅದರ ಫಲವಾಗಿ, ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿತ್ತು. ₹ 11 ಕೋಟಿ ಅನುದಾನವನ್ನೂ ಆಗಿನ ಸರ್ಕಾರ ನಿಗಮಕ್ಕೆ ಬಿಡುಗಡೆ ಮಾಡಿತ್ತು. ಸಾವಿರಕ್ಕೂ ಅಧಿಕ ಫಲಾನುಭವಿಗಳು ಈ ನಿಗಮದ ಪ್ರಯೋಜನ ಪಡೆದಿದ್ದರು. ಆದರೆ, ಈಗಿನ ಸರ್ಕಾರ ನಿಗಮಕ್ಕೆ ಕೇವಲ ₹ 5 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದು ಏನೇನೂ ಸಾಲದು’ ಎಂದು ಅವರು ತಿಳಿಸಿದ್ದಾರೆ.

‘ಸರ್ಕಾರ ಈ ವರ್ಷ ನೀಡಿರುವ ಅನುದಾನದಲ್ಲಿ ಆಡಳಿತಾತ್ಮಕ ವೆಚ್ಚ ಕಳೆದು ₹ 3 ಕೋಟಿಗಳಷ್ಟೇ ಫಲಾನುಭವಿಗಳಿಗೆ ಸಿಗುತ್ತದೆ. ಇದರಲ್ಲಿ 300 ಮಂದಿಗಷ್ಟೇ ಸಹಾಯ ಮಾಡಲು ಸಾಧ್ಯ. ಈಗಾಗಲೇ ಸಹಾಯ ಕೋರಿ ನಿಗಮಕ್ಕೆ 4 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಹಾಗಾಗಿ ಅನುದಾನ ಹೆಚ್ಚಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT