ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ರ‍್ಯಾಲಿ

Last Updated 3 ಜನವರಿ 2020, 7:15 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ‘ಮಾಸಿಕ ಕನಿಷ್ಠಗೌರವಧನ ₹ 12 ಸಾವಿರ ನಿಗದಿಪಡಿಸಬೇಕು’ ಎಂಬುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿಆಶಾ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ವಿವಿಧ ಜಿಲ್ಲೆಗಳಿಂದ ಬಂದಿದ್ದ ಕಾರ್ಯಕರ್ತೆಯರು ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು. 15 ತಿಂಗಳುಗಳಿಂದಬಾಕಿ ಉಳಿಸಿಕೊಂಡಿರುವಪ್ರೋತ್ಸಾಹ ಧನವನ್ನುಒಂದೇ ಬಾರಿ ಪಾವತಿಸಬೇಕು ಎಂದುಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ.

ಹಾವೇರಿ, ರಾಯಚೂರು, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿರುವಕಾರ್ಯಕರ್ತೆಯರು ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವರೆಗೆ ರ‍್ಯಾಲಿ ನಡೆಸಿದರು. ಇದೀಗ ಸ್ವತಂತ್ರ ಉದ್ಯಾನದಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 300 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. 5 ಕೆಎಸ್‌ಆರ್‌ಪಿ ತುಕಡಿ ಹಾಗೂ 3 ಸಿಎಆರ್ ತುಕಡಿಗಳು ಭದ್ರತೆಗೆ ನಿಯೋಜನೆ ಆಗಿದೆ.

ರಾಜ್ಯ ಆಶಾ ಕಾರ್ಯಕರ್ತೆ ಸಂಘಟನೆ ಕಾರ್ಯದರ್ಶಿ ನಾಗಲಕ್ಷ್ಮೀ ನೇತೃತ್ವದಲ್ಲಿ ರ‍್ಯಾಲಿಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಂಚಾರ ಅಸ್ತವ್ಯಸ್ತ: ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಿಂದಾಗಿ ನಗರದಕೆ.ಆರ್.ಸರ್ಕಲ್, ನೃಪತುಂಗ ರಸ್ತೆ, ಮಲ್ಲೇಶ್ವರ, ಅರಮನೆ ರಸ್ತೆ, ಬಳ್ಳಾರಿ ರಸ್ತೆ, ಶೇಷಾದ್ರಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ.

ಸ್ವಾತಂತ್ರ್ಯ ಉದ್ಯಾನ ಸಮೀಪ ಆಶಾ ಕಾರ್ಯಕರ್ತೆಯ ಪ್ರತಿಭಟನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT