ಭಾನುವಾರ, ಜೂನ್ 26, 2022
26 °C

ಪೋರ್ಟಲ್‌ ಸಮಸ್ಯೆ ನಿವಾರಣೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರ್‌ಸಿಎಚ್ ಪೋರ್ಟಲ್‌ನಲ್ಲಿನ ಸಮಸ್ಯೆ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದು, ಮಂಗಳವಾರ (ಮೇ 17) ಬೆಳಿಗ್ಗೆ 11 ಗಂಟೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

‘ದತ್ತಾಂಶ ನಮೂದಿಸುವ ತಂತ್ರಾಂಶದಲ್ಲಿನ ಸಮಸ್ಯೆಯಿಂದಾಗಿ ಆಶಾ ಕಾರ್ಯಕರ್ತೆಯರು ತೊಂದರೆ
ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಬೇಕು. ಹೆಚ್ಚುವರಿ ಕೆಲಸಗಳಿಂದಲೂ ಮುಕ್ತಿ ನೀಡಬೇಕು. ಅವರಿಗೆ ವೈದ್ಯಕೀಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ತಿಳಿಸಿದ್ದಾರೆ. 

‘ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಹಲವು ವರ್ಷಗಳಿಂದ ಚಳವಳಿ
ಗಳನ್ನು ನಡೆಸಲಾಗುತ್ತಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ ಪ್ರತಿಭಟನೆ ನಡೆಸಲಾ
ಗುತ್ತಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು