ಶುಕ್ರವಾರ, ಆಗಸ್ಟ್ 12, 2022
23 °C
ಗುಟ್ಟೆಪಾಳ್ಯದಲ್ಲಿ ಗುದ್ದಲಿ ಪೂಜೆ

395 ಫಲಾನುಭವಿಗಳಿಗೆ ‘ಆಶ್ರಯ’ ನಿವೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಂಗೇರಿ: ‘ತರಳು ಗ್ರಾಮ ಪಂಚಾಯಿತಿಯ ಗುಟ್ಟೆಪಾಳ್ಯದಲ್ಲಿ 395 ಅರ್ಹ ಫಲಾನುಭವಿಗಳಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಗುಟ್ಟೆಪಾಳ್ಯದಲ್ಲಿ ಆಶ್ರಯ ಯೋಜನೆಯಡಿ ಮಂಜೂರಾಗಿರುವ ಜಮೀನಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಸ್ವಂತ ಸೂರಿಲ್ಲದವರಿಗೆ ನಿವೇಶನ ಹಂಚಿಕೆ ಮಾಡಲು ಗುಟ್ಟೆಪಾಳ್ಯದಲ್ಲಿ 10 ಎಕರೆ  ಗುರುತಿಸಲಾಗಿದೆ. ಕೆಲವು ಮಾನದಂಡಗಳ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಿ, ನಿವೇಶನ ಹಂಚಿಕೆ ಮಾಡಲಾಗುವುದು. ಬಡವರಿಗಾಗಿ ಬಹುಮಹಡಿ ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಹಂಚಿಕೆಯಾಗಲಿದೆ’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಾಗವೇಣಿ, ‘ಗ್ರಾಮ ಸಭೆಗಳ ಮೂಲಕ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಕಗ್ಗಲೀಪುರ ವ್ಯಾಪ್ತಿಯ 17 ಮಂದಿಗೂ ಇದೇ ಸ್ಥಳದಲ್ಲಿ ನಿವೇಶನ ಕಲ್ಪಿಸಲಾಗುವುದು’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು