ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಪೌರ ಕಾರ್ಮಿಕರಿಗೆ ಶನಿವಾರ ಸಿಹಿ ಹಂಚಿದರು.

ಅರಮನೆ ನಗರ ವಾರ್ಡ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ಜತೆ ಸಂವಾದ ನಡೆಸಿದ ಅವರು, ‘ಯಾವುದೇ ಕಠಿಣ ಸಂದರ್ಭದಲ್ಲೂ ಪೌರ ಕಾರ್ಮಿಕರು ಕೆಲಸ ಮಾಡುತ್ತಾರೆ. ಮಳೆ, ಬಿಸಿಲು, ಯಾವುದನ್ನೂ ಲೆಕ್ಕಿಸದೆ ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ. ಕೋವಿಡ್ ಸಂಕಷ್ಟ ಕಾಲದಲ್ಲಿ ಇವರೆಲ್ಲರೂ ತಮ್ಮ ಜೀವ ಲೆಕ್ಕಿಸದೆ ಕೆಲಸ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.

‘ಮಲ್ಲೇಶ್ವರ ಕ್ಷೇತ್ರದಲ್ಲಿ ಎಲ್ಲ ಪೌರ ಕಾರ್ಮಿಕರಿಗೆ ಈಗಾಗಲೇ ಲಸಿಕೆ ಹಾಕಲಾಗಿದೆ. ಅವರಿಗೆ ಸಕಾಲಕ್ಕೆ ಆಹಾರದ ಕಿಟ್ಗಳನ್ನು ಒದಗಿಸಲಾಗಿದೆ. ಯಾವುದೇ ಸಮಸ್ಯೆ ಇದ್ದರೂ ಆದ್ಯತೆ ಮೇರೆಗೆ ನೆರವಿನ ಹಸ್ತ ಚಾಚಲಾಗುತ್ತಿದೆ’ ಎಂದು ಸಚಿವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.