ಹೃದಯಾಘಾತದಿಂದ ಎಎಸ್ಐ ಸಾವು

ಬೆಂಗಳೂರು: ಜೆ.ಸಿ.ನಗರ ಪೊಲೀಸ್ ಠಾಣೆಯ ಎಎಸ್ಐ ರಂಗಸ್ವಾಮಿ (59) ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದಾಗಲೇ ಹೃದಯಾಘಾತದಿಂದ ಶನಿವಾರ ನಿಧನರಾದರು.
ಇವರು ಜೆ.ಸಿ.ನಗರ ಠಾಣೆಯಲ್ಲಿ ಹಲವು ವರ್ಷಗಳಿಂದ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಧ್ಯಾಹ್ನ ಎಂದಿನಂತೆ ಊಟ ಮುಗಿಸಿ, ಶೂ ಧರಿಸುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದರು. ಠಾಣೆಯಲ್ಲಿದ್ದ ಸಿಬ್ಬಂದಿ ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಅವರು ಹೃದಯಾಘಾತದಿಂದ ಮತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.
‘ಪೀಣ್ಯ ಎರಡನೇ ಹಂತದಲ್ಲಿ ವಾಸವಿದ್ದ ಇವರಿಗೆ ಪತ್ನಿ ಹಾಗೂ ಮೂವರು ಮಕ್ಕಳು ಇದ್ದಾರೆ. ಮುಂದಿನ ಅಕ್ಟೋಬರ್ನಲ್ಲಿ ರಂಗಸ್ವಾಮಿ ಅವರು ನಿವೃತ್ತಿ ಹೊಂದಬೇಕಿತ್ತು’ ಎಂದು ಸಹೋದ್ಯೋಗಿಗಳು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.