ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಲ್ಲಿ ಕ್ಷಮೆಯಾಚಿಸಿ: ಕುಮಾರಸ್ವಾಮಿಗೆ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ

Last Updated 7 ಜನವರಿ 2023, 21:11 IST
ಅಕ್ಷರ ಗಾತ್ರ

ಬೆಂಗಳೂರು: ರಾಜಕಾರಣಿಗಳು ತಮ್ಮ ವೈರಿಗಳನ್ನು ಟೀಕಿಸುವ ಭರದಲ್ಲಿ ಅಂಗವಿಕಲರನ್ನು ಹಿಯಾಳಿಸುವ ರೀತಿಯಲ್ಲಿ ಪದಗಳ ಬಳಕೆ ಮಾಡುತ್ತಿರುವುದನ್ನು ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಖಂಡಿಸಿದೆ.

‘ತೋಟಗಾರಿಕೆ ಸಚಿವ ಮುನಿರತ್ನ ಅವರು ಜೆಡಿಎಸ್‌ನ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕುಂಟನ ಕಥೆ ನೆನಪಾಗುತ್ತದೆ ಎಂದು ಅಂಗವಿಕಲರಿಗೆ ಹೋಲಿಕೆ ಮಾಡಿರುವುದಕ್ಕೆ ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ್ ಪುಟ್ಟಪ್ಪ ಆಗ್ರಹಿಸಿದರು.

‘ಸಮಾಜದಲ್ಲಿ ಮಾದರಿಯಾಗಬೇಕಿದ್ದ ರಾಜಕಾರಣಿಗಳು ಸಾರ್ವಜನಿಕವಾಗಿ ಎಲುಬಿಲ್ಲದ ನಾಲಿಗೆಯಿಂದ ಅಂಗವಿಕಲರಿಗೆ ನೋವುಂಟಾಗುವ ಕುಂಟ, ಕುರುಡ ಪದಗಳನ್ನು ಬಳಸಿ ಅವಮಾನ ಮಾಡುತ್ತಿದ್ದಾರೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT