‘ಕಾರ್ಯಕ್ರಮ ರದ್ದುಗೊಂಡಿದ್ದರಿಂದ ನಿರಾಶೆಗೊಂಡ ಜನರು, ಕುರ್ಚಿಗಳನ್ನು ಬಿಸಾಡಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಕರೆಯಿಸಿ ಸ್ಥಳದಲ್ಲಿದ್ದ ಜನರನ್ನು ನಿಯಂತ್ರಿಸಿ, ಹೊರಕ್ಕೆ ಕಳುಹಿಸಲಾಯಿತು. ಐದು ವರ್ಷಗಳಿಂದ ಕಾರ್ಯಕ್ರಮ ಆಯೋಜಿಸುತ್ತಿದ್ದು, ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರು. ಜನದಟ್ಟಣೆ ನಿಯಂತ್ರಿಸಲು ಆಯೋಜಕರಿಗೂ ಕಷ್ಟವಾಯಿತು. ಕರ್ಮ ಪೂಜಾ ಕಮಿಟಿಯ ಮುಖ್ಯಸ್ಥರಾದ ಚಿತ್ರಾ ತಾರ್ಕಿ ಸೇರಿದಂತೆ ಕೆಲವರ ವಿರುದ್ಧ ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.