ಬೆಂಗಳೂರು: ಕೊಡಿಗೆಹಳ್ಳಿಯ ಕರ್ನಾಟಕ ಬ್ಯಾಂಕ್ ಎದುರು ಮಹಿಳೆಯೊಬ್ಬರಿಗೆ ಕಲ್ಲಿನಿಂದ ಜಜ್ಜಿ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಮಹಿಳೆಯೊಬ್ಬರು ನಡೆದು ತೆರಳುತ್ತಿದ್ದರು. ಬಿಹಾರದ ವ್ಯಕ್ತಿಯೊಬ್ಬ ಏಕಾಏಕಿ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ. ಆಗ, ಸ್ಥಳದಲ್ಲಿದ್ದವರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.
‘ಹಲ್ಲೆ ನಡೆಸಿದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.