ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಹಲ್ಲೆ: ಕಾರು ಚಾಲಕನ ವಶ

Published 16 ಮಾರ್ಚ್ 2024, 16:32 IST
Last Updated 16 ಮಾರ್ಚ್ 2024, 16:32 IST
ಅಕ್ಷರ ಗಾತ್ರ

ಬೆಂಗಳೂರು: ಏಕಮುಖ ರಸ್ತೆಯಲ್ಲಿ ಕಾರು ಚಲಾಯಿಸಿ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ್ದ ಕಾರು ಚಾಲಕನನ್ನು ಮಹದೇವಪುರ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ವೈಟ್‌ಫೀಲ್ಡ್‌ ಬಳಿಯ ಜಂಕ್ಷನ್‌ನಲ್ಲಿ ಶುಕ್ರವಾರ ಏಕಮುಖ ರಸ್ತೆಯಲ್ಲಿ ಆರೋಪಿ ಸುನೀಲ್(37) ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಅದೇ ಮಾರ್ಗದಲ್ಲಿ ಎದುರು ಬಂದ ಬೈಕ್ ಸವಾರ, ಆರೋಪಿಯನ್ನು ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ, ಏಕಾಏಕಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯವನ್ನು ಸ್ಥಳೀಯರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಾಕಿದ್ದರು. ವಿಡಿಯೊ ಆಧರಿಸಿ, ಕಾರು ಚಾಲಕ ಸುನೀಲ್‌ನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT