ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಷಿಯರ್ ಮೇಲೆ ಹಲ್ಲೆ: ಸಹೋದ್ಯೋಗಿ ಸೇರಿ ಐವರು ಬಂಧನ

Published 5 ಏಪ್ರಿಲ್ 2024, 15:54 IST
Last Updated 5 ಏಪ್ರಿಲ್ 2024, 15:54 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿ ವೈಷಮ್ಯದಿಂದಾಗಿ ಕಂಪನಿಯೊಂದರ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ಸಹೋದ್ಯೋಗಿ ಸೇರಿ ಐವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕಸ್ತೂರಿ ನಗರದ ಉಮಾಶಂಕರ್ ರೆಡ್ಡಿ (37), ಕೆ.ಆರ್.ಪುರ ಟಿ.ಸಿ.ಪಾಳ್ಯದ ಅನುಷ್ ಕ್ಯಾಲ್ವೀನ್ (23), ಮುತ್ತು (19) ಹಾಗೂ ಕಲ್ಯಾಣನಗರದ ವಿನೀಷ್ (26) ಬಂಧಿತರು. ಇವರೆಲ್ಲರೂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಮಾರ್ಚ್ 31ರಂದು ಸಂಜೆ ಹೆಣ್ಣೂರು ಬಳಿಯ ಹೊರ ವರ್ತುಲ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಇದರ ವಿಡಿಯೊ ಚಿತ್ರೀಕರಿಸಿದ್ದ ವ್ಯಕ್ತಿಯೊಬ್ಬರು, ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದರು. ವಿಡಿಯೊ ಆಧರಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.

ಕಂಪನಿ ಕೆಲಸದಲ್ಲಿ ವೈಷಮ್ಯ: ‘ಹಲ್ಲೆಗೀಡಾಗಿದ್ದ ವ್ಯಕ್ತಿಯನ್ನು ಪತ್ತೆ ಮಾಡಿ ಹೇಳಿಕೆ ಪಡೆಯಲಾಯಿತು. ಅವರು, ಕಂಪನಿಯೊಂದರಲ್ಲಿ ಕ್ಯಾಷಿಯರ್ ಆಗಿರುವುದು ಗೊತ್ತಾಯಿತು. ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉಮಾಶಂಕರ್ ರೆಡ್ಡಿ, ದೂರುದಾರರ ಮೇಲೆ ವೃತ್ತಿ ವೈಷಮ್ಯ ಇಟ್ಟುಕೊಂಡಿದ್ದ. ತನ್ನ ಸ್ನೇಹಿತರ ಜೊತೆ ಸೇರಿ ದೂರುದಾರರ ಮೇಲೆ ಹಲ್ಲೆ ಮಾಡಿದ್ದ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT