ಬುಧವಾರ, ಅಕ್ಟೋಬರ್ 21, 2020
24 °C

ಮಾರ್ಷಲ್ ಮೇಲೆ ಹಲ್ಲೆ; ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್.ಪುರ: ‘ಮಾಸ್ಕ್ ಹಾಕಿಕೊಳ್ಳಿ’ ಎಂದು ಹೇಳಿದ್ದಕ್ಕೆ ಬಿಬಿಎಂಪಿ ಮಾರ್ಷಲ್ ಮೇಲೆಯೇ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.

ಕುಲದೇವಿ ಗ್ರಾಮದ ಅರುಣ್ (26) ಹಾಗೂ ಜಗದೀಶ್ (28) ಬಂಧಿತರು.

‘ಕೆ.ಆರ್.ಪುರ ಠಾಣೆ ವ್ಯಾಪ್ತಿಯಲ್ಲಿ ಓಡಾಡುತ್ತಿದ್ದ ಆರೋಪಿಗಳು, ಮಾಸ್ಕ್ ಧರಿಸಿರಲಿಲ್ಲ. ಅದೇ ಸ್ಥಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಮಾರ್ಷಲೊಬ್ಬರು ಆರೋಪಿಗಳನ್ನು ತಡೆದು ಪ್ರಶ್ನಿಸಿದ್ದರು. ‘ಕೊರೊನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ದಯವಿಟ್ಟು ಮಾಸ್ಕ್ ಹಾಕಿಕೊಂಡು ಓಡಾಡಿ’ ಎಂದು ಹೇಳಿದ್ದರು. ದಂಡ ಪಾವತಿಸುವಂತೆಯೂ ತಿಳಿಸಿದ್ದರು’ ಎಂದು ಕೆ.ಆರ್.ಪುರ ಪೊಲೀಸರು ಹೇಳಿದರು.

‘ಮಾರ್ಷಲ್ ಜೊತೆ ವಾಗ್ವಾದ ನಡೆಸಿದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಸಹ ಮಾಡಿದರು' ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.