ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ನಾಮಫಲಕ ಕಣ್ಗಾವಲಿಗೆ ‘ಕನ್ನಡ ಕಣ್ಗಾವಲು’ ಆ್ಯಪ್

Published 15 ಫೆಬ್ರುವರಿ 2024, 15:50 IST
Last Updated 15 ಫೆಬ್ರುವರಿ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ದಿಮೆಗಳು ಮತ್ತು ಕೈಗಾರಿಕೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆಯಲ್ಲಿ ಪ್ರದರ್ಶಿಸಿರುವುದನ್ನು ಖಚಿತಪಡಿಸಿಕೊಳ್ಳಲು ಅವಕಾಶ ಕಲ್ಪಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ–2024’ಕ್ಕೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು.

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲ ಸಂಸ್ಥೆಗಳಿಗೂ ಈ ತಿದ್ದುಪಡಿ ಅನ್ವಯವಾಗಲಿದೆ. ಕಾಯ್ದೆಯನ್ನು ಜಾರಿಗೊಳಿಸಲು ರಚಿಸಲಾಗುವ ರಾಜ್ಯಮಟ್ಟದ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರನ್ನು ಸದಸ್ಯರನ್ನಾಗಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿ ನೇಮಿಸಲು ಈ ತಿದ್ದುಪಡಿ ಅವಕಾಶ ಕಲ್ಪಿಸಲಿದೆ.

ಕಾಯ್ದೆಯ ಅನುಷ್ಠಾನಕ್ಕೆ ಕಾರ್ಯಪಡೆ ರಚಿಸಲಾಗುವುದು. ಕನ್ನಡ ಬಳಕೆಯ ಕಾಯ್ದೆಯನ್ನು ಅನುಷ್ಠಾನಗೊಳಿಸದವರ ವಿರುದ್ಧ ದೂರು ಸಲ್ಲಿಸಲು ‘ಕನ್ನಡ ಕಣ್ಗಾವಲು’ ಮೊಬೈಲ್‌ ಆ್ಯಪ್‌ ರೂಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಪರಿಶೀಲನೆ ನಡೆಸಿ, ದಂಡ ವಿಧಿಸುವ ಅಧಿಕಾರವನ್ನು ಪೊಲೀಸರಿಗೆ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಸಲಹೆ ನೀಡಿದರು. ‘ಕಾರ್ಯಪಡೆಯಲ್ಲಿ ಪೊಲೀಸರನ್ನೂ ನೇಮಿಸಲಾಗುವುದು. ದಂಡ ವಿಧಿಸುವ ಕುರಿತು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗುವುದು’ ಎಂದು ಸಚಿವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT