ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್. ಸುರೇಶ್ ಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾದ ಜಿ.ಪ್ರಕಾಶ್ ಮತ್ತು ಮನೋಹರ್ ನೇತೃತ್ವದ ನಿಯೋಗ ವಿಧಾನಸೌಧ ಠಾಣೆಯಲ್ಲಿ ದೂರು ನೀಡಿದೆ.

‘ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ’ ಎಂಬ ಘೋಷಣೆವುಳ್ಳ ಪೋಸ್ಟರ್ಗಳನ್ನು ಅವರ ನಿವಾಸಕ್ಕೆ ಅಂಟಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದರು.

ಬಳಿಕ ಈ ಸಂಬಂಧ ಬಸವೇಶ್ವರನಗರ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ, ಈ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಲ್ಲಿಯೇ ದೂರು ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದರು. ಹಾಗಾಗಿ ಭಾನುವಾರ ಕಾಂಗ್ರೆಸ್ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿರುವ ಸುರೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ದೂರು ಸ್ವೀಕರಿಸಲಾಗಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕೈ’ ಕಾರ್ಯಕರ್ತರ ಬಂಧನ, ಬಿಡುಗಡೆ

ಬೆಂಗಳೂರು: ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ನಿವಾಸಕ್ಕೆ ‘ಸಂಸ್ಕೃತಿ ಇಲ್ಲದ ಶಾಸಕ’ಎಂದು ಪೋಸ್ಟರ್ ಅಂಟಿಸಿದ್ದ ನಾಲ್ವರು ಕಾಂಗ್ರೆಸ್ ಕಾರ್ಯಕರ್ತ ರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುರೇಶ್ ಕುಮಾರ್ ಅವರ ಕಾರು ಚಾಲಕ ಪುನೀತ್ ನೀಡಿದ ದೂರಿನ ಮೇಲೆ ಬಸವೇಶ್ವರ ನಗರದ ಶಂಕರ್, ಮಂಜು, ನವೀನ್ ಹಾಗೂ ಸಾಯಿ ಎಂಬುವರನ್ನು ಬಂಧಿಸಿ, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಕುರಿತು ಸುರೇಶ್ ಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕುರಿತು ಸದನದಲ್ಲಿ ಸುರೇಶ್ ಕುಮಾರ್ ಕ್ಷಮೆಯಾಚಿಸಿದ್ದರು.

ಈ ಘಟನೆ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸುರೇಶ್ ಕುಮಾರ್ ಅವರ ಮನೆ ಆವರಣದಲ್ಲಿ ಪೋಸ್ಟರ್ ಅಂಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.