ಶುಕ್ರವಾರ, ಮಾರ್ಚ್ 31, 2023
25 °C

₹ 1.54 ಕೋಟಿ ಮೌಲ್ಯದ ಸ್ವತ್ತುಗಳ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಕ್ರಮಗಳ ತಡೆಗೆ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಕಣ್ಗಾವಲು ಬಿಗಿಗೊಳಿಸಿದ್ದು, ಶುಕ್ರವಾರ ಒಂದೇ ದಿನ ನಗದು, ಮದ್ಯ, ಮಾದಕವಸ್ತು, ಚಿನ್ನಾಭರಣ ಸೇರಿದಂತೆ ₹ 1.54 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

‘ಶುಕ್ರವಾರ ಬೆಳಿಗ್ಗೆ 6ರಿಂದ ಶನಿವಾರ ಬೆಳಿಗ್ಗೆ 6ರವರೆಗಿನ ಅವಧಿಯಲ್ಲಿ ₹ 53 ಲಕ್ಷ ನಗದು, ₹ 58.86 ಲಕ್ಷ ಮೌಲ್ಯದ 18,676 ಲೀಟರ್‌ ಮದ್ಯ, ₹ 18.82 ಲಕ್ಷ ಮೌಲ್ಯದ 577 ಕೆ.ಜಿ. ಮಾದಕವಸ್ತುಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳನ್ನು ವಿವಿಧೆಡೆ ವಶಕ್ಕೆ ಪಡೆಯಲಾಗಿದೆ. ಚಿನ್ನ, ಬೆಳ್ಳಿಯ ಆಭರಣಗಳು, ಲ್ಯಾಪ್‌ಟಾಪ್‌, ಕುಕ್ಕರ್‌ ಸೇರಿದಂತೆ ಹಲವು ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

ಚುನಾವಣಾ ಅಕ್ರಮಗಳ ತಡೆಗೆ ಕಣ್ಗಾವಲು ಆರಂಭಿಸಿದ ದಿನದಿಂದ ಈವರೆಗೆ ಒಟ್ಟು ₹ 9.29 ಕೋಟಿ ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು