ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಕಾಯಕಲ್ಪ ಕಾರ್ಯಕ್ಕಾಗಿ ರಾಜೀನಾಮೆ: ಸುಹೇಲ್‌ ಅಹಮದ್‌

Published 27 ನವೆಂಬರ್ 2023, 21:18 IST
Last Updated 27 ನವೆಂಬರ್ 2023, 21:18 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ತತ್ವಗಳು ಅಪಾಯದಲ್ಲಿವೆ ಎಂದು ಹೇಳಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ (1ನೇ ಪಡೆ, ಆಂತರಿಕ ಭಧ್ರತಾ ವಿಭಾಗ) ಅಸಿಸ್ಟೆಂಟ್‌ ಕಮಾಂಡೆಂಟ್‌ ಸುಹೇಲ್‌ ಅಹಮದ್‌ ಅವರು, ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಸಂಬಂಧ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಿಗೆ (ಆಡಳಿತ ವಿಭಾಗ) ಪತ್ರ ಬರೆದಿದ್ದಾರೆ.

‘ಸಂವಿಧಾನ ಕಾಯಕಲ್ಪ ಕಾರ್ಯಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸಂವಿಧಾನ ಕೊಡುಗೆಯಾಗಿ ನೀಡಿದ ಹುದ್ದೆಯನ್ನು ದೇಶಕ್ಕೆ ಸಂವಿಧಾನ ಸಮರ್ಪಣೆಯಾದ ಈ ಮಹತ್ವದ ದಿನದಂದು ಸಮರ್ಪಿಸಿ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ನವೆಂಬರ್‌ 26ರಂದು ಪತ್ರ ಬರೆದಿದ್ದಾರೆ. ಈ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT