ಗುರುವಾರ , ಜೂನ್ 17, 2021
21 °C

ಅಪಘಾತ: ಸಹಾಯಕ ಎಂಜಿನಿಯರ್ ಸಾವು‍

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು/ರಾಯಚೂರು: ಆಂಧ್ರಪ್ರದೇಶದ ಪೆನುಗೊಂಡ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಅಪಘಾತ ಸಂಭವಿ
ಸಿದ್ದು, ರಾಜ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಪ್ರಕಾಶ್ ಪಾಟೀಲ ಎಂಬುವರು ದುರ್ಮರಣಕ್ಕೀಡಾಗಿದ್ದಾರೆ.

‘ಬೆಂಗಳೂರಿನಲ್ಲಿ ವಾಸವಿದ್ದ ಪ್ರಕಾಶ್, ಪತ್ನಿ ಶ್ರೀದೇವಿ ಹಾಗೂ ಮಗಳ ಜೊತೆಯಲ್ಲಿ ಕಾರಿನಲ್ಲಿ ಮಂತ್ರಾಲಯಕ್ಕೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಪತ್ನಿ ಹಾಗೂ ಮಗಳಿಗೂ ಗಾಯವಾಗಿದ್ದು, ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಪ್ರಕಾಶ್ ಸಾವಿಗೀಡಾಗಿದ್ದಾರೆ. ರಕ್ಷಣೆಗೆ ಬಂದಿದ್ದ ಸ್ಥಳೀಯರು ಪತ್ನಿ ಹಾಗೂ ಮಗಳನ್ನು ಆಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಪೆನುಗೊಂಡ ಪೊಲೀಸರೇ ನಗರಕ್ಕೆ ಬಂದು, ಆಸ್ಪತ್ರೆಯಲ್ಲೇ ಗಾಯಾಳುಗಳ ಹೇಳಿಕೆ ದಾಖಲಿಸಿಕೊಂಡು ಹೋಗಿ ದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ಮೃತಪಟ್ಟ ಪ್ರಕಾಶ್, ಅಖಿಲ ಭಾರತ ಡಿಪ್ಲೊಮಾ ಇಂಜಿನಿಯರ್‌ಗಳ ಸಂಘದ ದಕ್ಷಿಣ ವಲಯದ ಕಾರ್ಯದರ್ಶಿಯೂ ಆಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು