ಗುರುವಾರ , ಜುಲೈ 7, 2022
23 °C

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ: ಆರೋಪಿ ಸೌಮ್ಯ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಬಂಧ ಆರೋಪಿ ಸೌಮ್ಯ ಎಂಬಾಕೆಯನ್ನು ಮಲ್ಲೇಶ್ವರ ಪೊಲೀಸರು ಭಾನುವಾರ ರಾತ್ರಿ ಮೈಸೂರಿನಲ್ಲಿ ಬಂಧಿಸಿದ್ದಾರೆ.

ಮಾರ್ಚ್‌ 14 ರಂದು ನಿಗದಿಯಾಗಿದ್ದ ಭೂಗೋಳಶಾಸ್ತ್ರ ವಿಷಯದ ಪ್ರಶ್ನೆಪತ್ರಿಕೆಯು ಪರೀಕ್ಷೆಗೆ ಅರ್ಧಗಂಟೆ ಮುಂಚೆ (ಬೆಳಿಗ್ಗೆ 8.30) ಸೋರಿಕೆಯಾಗಿ ವಾಟ್ಸಾಪ್‌ನಲ್ಲಿ ಹರಿದಾಡಿತ್ತು. 

ಸೌಮ್ಯ ಅವರ ಮೊಬೈಲ್ ಸಂಖ್ಯೆಯಿಂದಲೇ  ಸುಮಾರು 18 ಪ್ರಶ್ನೆಗಳು ಸೋರಿಕೆಯಾಗಿದೆ ಎಂದು ಆರೋಪಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಮಲ್ಲೇಶ್ವರ ಪೊಲೀಸ್ ಠಾಣೆಗೆ ಇದೇ 22 ರಂದು ದೂರು ನೀಡಿದ್ದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದರು.

'ಸೌಮ್ಯ ಎಂಬಾಕೆಯನ್ನು ಮೈಸೂರಿನಲ್ಲಿ ಬಂಧಿಸಿ ಭಾನುವಾರ ರಾತ್ರಿ ನಗರಕ್ಕೆ ಕರೆತರಲಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಆಕೆಯನ್ನು ಪೊಲೀಸ್ ಸುಪರ್ದಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವೆ' ಎಂದು ಉತ್ತರ ವಿಭಾಗದ ಡಿಸಿಪಿ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು