ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ರಾಡ್‌ನಿಂದ ಹಲ್ಲೆ: ವಿಡಿಯೊ ಆಧರಿಸಿ ತನಿಖೆ

Published 2 ಏಪ್ರಿಲ್ 2024, 19:13 IST
Last Updated 2 ಏಪ್ರಿಲ್ 2024, 19:13 IST
ಅಕ್ಷರ ಗಾತ್ರ

ಬೆಂಗಳೂರು: ಹೊರವರ್ತುಲ ರಸ್ತೆಯಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಲಾಗಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಹೆಣ್ಣೂರು - ಬಾಣಸವಾಡಿ ನಡುವಿನ ಹೊರ ವರ್ತುಲ ರಸ್ತೆಯಲ್ಲಿ ಮಾರ್ಚ್ 31ರಂದು ಹಲ್ಲೆ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

ಹಲ್ಲೆಯ ವಿಡಿಯೊ ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದೇ ದೃಶ್ಯವನ್ನು ವ್ಯಕ್ತಿಯೊಬ್ಬರು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಅದನ್ನು ಹಂಚಿಕೊಂಡಿರುವ ಹಲವರು, ‘ಬೆಂಗಳೂರಿನ ಜನರಿಗೆ ರಕ್ಷಣೆ ಇಲ್ಲದಂತಾಗಿದೆ. ದೃಶ್ಯ ನೋಡಿ ಆತಂಕ ಶುರುವಾಗಿದೆ’ ಎಂದಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್, ‘ವ್ಯಕ್ತಿಯೊಬ್ಬರ ಮೇಲೆ ಇಬ್ಬರು ಆರೋಪಿಗಳು ಹಲ್ಲೆ ಮಾಡಿರುವ ದೃಶ್ಯ ವಿಡಿಯೊದಲ್ಲಿದೆ. ವಿಡಿಯೊ ಆಧರಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಗಾಯಾಳು ಹಾಗೂ ಹಲ್ಲೆ ಮಾಡಿದವರು ಯಾರು ? ಎಂಬುದನ್ನು ಪತ್ತೆ ಮಾಡಲಾಗುತ್ತಿದೆ. ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಗಳನ್ನೂ ಪರಿಶೀಲಿಸಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT