ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿ ಜನ್ಮದಿನ ಸುಶಾಸನ ದಿನ

ವಿಧಾನಸೌಧದಲ್ಲಿ ಇಂದು ಇಡೀ ದಿನ ಕಾರ್ಯಕ್ರಮ
Last Updated 24 ಡಿಸೆಂಬರ್ 2020, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಶುಕ್ರವಾರ (ಡಿಸೆಂಬರ್‌ 25) ‘ಸುಶಾಸನ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಉತ್ತಮ ಆಡಳಿತಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಳಿಗ್ಗೆ 10ರಿಂದ ಸಂಜೆ 4.15ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಪ್ರಧಾನಿ ನರೇಂದ್ರ ಮೋದಿಯವರು ಬೆಳಿಗ್ಗೆ 11 ಗಂಟೆಗೆ ವರ್ಚ್ಯುವಲ್‌ ವ್ಯವಸ್ಥೆ ಮೂಲಕ ‘ಸುಶಾಸನ ದಿನ’ದ ಕುರಿತು ಮಾತನಾಡುವರು. ಉನ್ನತ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ನವೋದ್ಯಮಗಳು, ಬ್ರ್ಯಾಂಡ್‌ ಬೆಂಗಳೂರು, ಉನ್ನತ ಶಿಕ್ಷಣದ ಹಂತದಲ್ಲಿ ಆಡಳಿತ ಮತ್ತು ನಾಯಕತ್ವ ಗುಣ ರೂಪಿಸುವುದು ಕುರಿತು ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್‌, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಕರಿಸಿದ್ದಪ್ಪ, ವಿಶ್ವವಿದ್ಯಾಲಯ ಅನುದಾನ ಆಯೋಗದ ಸದಸ್ಯ ಪ್ರೊ.ಎಂ.ಕೆ. ಶ್ರೀಧರ್‌, ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ. ತಿಮ್ಮೇಗೌಡ ಸೇರಿದಂತೆ ಹಲವರು ವಿಚಾರ ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT