ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ದಿನವನ್ನು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಆಚರಿಸಲಾಯಿತು.

ಶಾಸಕ ಕೆ. ಗೋಪಾಲಯ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಪುಷ್ಪ ನಮನ ಸಲ್ಲಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವೃದ್ಧಾಪ್ಯ ವೇತನ, ವಿಧವಾ ವೇತನ ಆದೇಶ ಪತ್ರಗಳನ್ನು, ಕ್ಷಯ ರೋಗಿಗಳಿಗೆ ಟಿಬಿ ಕಿಟ್ಗಳನ್ನು ವಿತರಿಸಿದರು. ‘ವಾಜಪೇಯಿ ಅವರು ದೇಶದಲ್ಲಿ ಅಜಾತಶತ್ರು ಆಗಿದ್ದರೆ, ಕೆ. ಗೋಪಾಲಯ್ಯ ಅವರು ಮಹಾಲಕ್ಷ್ಮೀ ಲೇಔಟ್ನಲ್ಲಿ ಅಜಾತಶತ್ರು’ ಎಂದು ವಿಜಯೇಂದ್ರ ಬಣ್ಣಿಸಿದರು.

ಮಹಾಲಕ್ಷ್ಮಿ ಲೇಔಟ್ ಮಂಡಲದ ಪದಾಧಿಕಾರಿಗಳ ಪದಗ್ರಹಣ ಈ ಸಂದರ್ಭದಲ್ಲಿ ನೆರವೇರಿತು. ನೂತನ ಅಧ್ಯಕ್ಷ ನಾಗೇಂದ್ರ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.

ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಹರೀಶ್, ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ, ಬಿಬಿಎಂಪಿ ಮಾಜಿ ಸದಸ್ಯೆ ಹೇಮಲತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.