ಶನಿವಾರ, ಜನವರಿ 16, 2021
24 °C

ಎಟಿಎಂ ಯಂತ್ರದಲ್ಲಿ ಸ್ಕಿಮ್ಮರ್; ವಿದೇಶಿ ಪ್ರಜೆ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಟಿಎಂ ಯಂತ್ರದಲ್ಲಿ ಸ್ಕಿಮ್ಮರ್ ಅಳವಡಿಸಿ ಕಳ್ಳತನ–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಉಪ್ಪಾರಪೇಟೆ ಠಾಣೆ ವ್ಯಾಪ್ತಿಯಲ್ಲಿರುವ ಎಟಿಎಂ ಯಂತ್ರದಲ್ಲಿ ಸ್ಕಿಮ್ಮರ್ ಉಪಕರಣ ಅಳವಡಿಸಿದ್ದ ಆರೋಪದಡಿ ವಿದೇಶಿ ಪ್ರಜೆಯೊಬ್ಬರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಕೊಲಂಬಿಯಾದ ಕ್ರಿಸ್ಟಿನೊ ನವೊರ್ ಎಂಬುವರನ್ನು ಸಾರ್ವಜನಿಕರೇ ಹಿಡಿದು ಹೊಯ್ಸಳ ಗಸ್ತು ವಾಹನದ ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

’ಐಡಿಬಿಐ ಬ್ಯಾಂಕ್‌ ಎಟಿಎಂ ಘಟಕದಲ್ಲಿದ್ದ ಯಂತ್ರ ಬಳಿ ಆರೋಪಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡ ಸ್ಥಳೀಯರು, ಅವರನ್ನು ಪ್ರಶ್ನಿಸಿದ್ದರು. ಸಮರ್ಪಕ ಉತ್ತರ ನೀಡದ ಆರೋಪಿ, ಸ್ಥಳದಿಂದ ಓಡಲು ಯತ್ನಿಸಿದ್ದರು. ಸಾರ್ವಜನಿಕರೇ ಆತನನ್ನು ಬೆನ್ನಟ್ಟಿ ಹಿಡಿದಿದ್ದಾರೆ.’

‘ಎಟಿಎಂ ಘಟಕದಲ್ಲಿ ಪರಿಶೀಲನೆ ನಡೆಸಲಾಗಿದೆ. ಆರೋಪಿ ಹಿನ್ನೆಲೆಯನ್ನು ಪತ್ತೆ ಮಾಡಲಾಗುತ್ತಿದ್ದು, ಶಿವಾಜಿನಗರ ಸೇರಿ ಹಲವು ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿರುವ ಮಾಹಿತಿ ಇದೆ’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು