ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಎಟಿಎಂಗೆ ತುಂಬಬೇಕಿದ್ದ ₹ 20 ಲಕ್ಷ ಸ್ವಂತಕ್ಕೆ ಬಳಕೆ

Published : 14 ಜುಲೈ 2023, 20:18 IST
Last Updated : 14 ಜುಲೈ 2023, 20:18 IST
ಫಾಲೋ ಮಾಡಿ
Comments

ಬೆಂಗಳೂರು: ನಗರದ ವಿವಿಧ ಬ್ಯಾಂಕ್‌ಗಳ ಎಟಿಎಂ ಯಂತ್ರಗಳಿಗೆ ತುಂಬಬೇಕಿದ್ದ ₹ 20 ಲಕ್ಷವನ್ನು ಸ್ವಂತಕ್ಕೆ ಬಳಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಮಂಜುನಾಥ್ ಹಾಗೂ ಚಿತ್ತೂರಿನ ಸಾಯಿ ಪವನ್ ಬಂಧಿತರು. ಇವರಿಂದ ₹ 8 ಲಕ್ಷ ನಗದು ಹಾಗೂ ₹ 1.50 ಲಕ್ಷ ಮೌಲ್ಯ ಐಫೋನ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ರೈಟರ್ ಸೆಫ್‌ಗಾರ್ಡ್ ಕಂಪನಿಯಲ್ಲಿ ಆರೋಪಿಗಳು ಕೆಲಸ ಮಾಡುತ್ತಿದ್ದರು. ಬ್ಯಾಂಕ್‌ಗಳಿಂದ ಸಂಗ್ರಹಿಸಿದ್ದ ಹಣವನ್ನು ಎಟಿಎಂ ಘಟಕಗಳಿಗೆ ತುಂಬುವ ಜವಾಬ್ದಾರಿ ವಹಿಸಿಕೊಂಡಿದ್ದರು. ಜೂನ್ 19ರಿಂದ 21ರ ಅವಧಿಯಲ್ಲಿ ಎಟಿಎಂ ಘಟಕಗಳಿಗೆ ತುಂಬಬೇಕಿದ್ದ ₹ 20 ಲಕ್ಷವನ್ನು ಸ್ವಂತಕ್ಕೆ ಬಳಸಿಕೊಂಡಿದ್ದರು.’

‘ಲೆಕ್ಕ ತಪಾಸಣೆ ವೇಳೆ ಆರೋಪಿಗಳ ಕೃತ್ಯ ಪತ್ತೆಯಾಗಿತ್ತು. ಕಂಪನಿ ಪ್ರತಿನಿಧಿ, ಇಬ್ಬರ ವಿರುದ್ಧವೂ ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT