ಸೋಮವಾರ, ಜನವರಿ 27, 2020
27 °C

ಎಟಿಎಂನಲ್ಲಿ ಕಳವು: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಟಿಎಂ ಯಂತ್ರ ಒಡೆಯದೆ, ಹೊಸ ತಂತ್ರ ಬಳಸಿ ಹಣ ಕಳವು ಮಾಡಿದ ಆರೋಪದ ಮೇಲೆ 12 ವರ್ಷದ ಬಾಲಕನೂ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ನಡೆದಿರುವ ಎರಡನೇ ಘಟನೆ ಇದಾಗಿದ್ದು, ಬ್ಯಾಂಕ್‌ ಅಧಿಕಾರಿಗಳ ಸಕಾಲಿಕ ಕ್ರಮದಿಂದಾಗಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ಗ್ಯಾಂಗ್‌ ದೇಶದ ಬಹುತೇಕ ದೊಡ್ಡ ನಗರಗಳಲ್ಲಿ ಕಾರ್ಯಾಚರಣೆ ನಡೆಸಿದೆ.

ಬಂಧಿತರನ್ನು ಮೊಹಮ್ಮದ್‌ ಆರೀಫ್‌ (23) ಹಾಗೂ 12 ವರ್ಷದ ಬಾಲಕ ಎಂದು ಗುರುತಿಸಲಾಗಿದೆ. ದೆಹಲಿ ಸಮೀಪದ ಗುರು ಗ್ರಾಮದವರಾದ ಇವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಎಲ್ಲೆಲ್ಲಿ ಹಣ ಕಳವು ಮಾಡಿದ್ದಾರೆ ಎಂಬ ಮಾಹಿತಿ ಪಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು