ಬುಧವಾರ, ಸೆಪ್ಟೆಂಬರ್ 29, 2021
21 °C

ಬೆಂಗಳೂರು: ಬಿಜಿಎಸ್ ಆಸ್ಪತ್ರೆ ಸಿಬ್ಬಂದಿ ಮೇಲೆ‌ ಹಲ್ಲೆ- ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಬಿಜಿಎಸ್ ಆಸ್ಪತ್ರೆ ಸಿಬ್ಬಂದಿ‌ ಮೇಲೆ ಹಲ್ಲೆ‌ ಮಾಡಿ ವೈದ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಇಬ್ಬರನ್ನು ಕೆಂಗೇರಿ‌ ಪೊಲೀಸರು ಬಂಧಿಸಿದ್ದಾರೆ.

ನಾಗರಬಾವಿಯ ಪ್ರಶಾಂತ್ (39) ಹಾಗೂ ಬ್ಯಾಡರಹಳ್ಳಿಯ ವೆಂಕಟೇಶ್ (32) ಬಂಧಿತರು. 

'ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ‌. ಆರೋಪಿಗಳ ಸಂಬಂಧಿಯೊಬ್ಬರು ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು' ಎಂದು ಪೊಲೀಸರು ತಿಳಿಸಿದರು.

'ಸಂಬಂಧಿಯನ್ನು ನೋಡಲು ವಾರ್ಡ್‌ನೊಳಗೆ ಬಿಡುವಂತೆ ಒತ್ತಾಯಿಸಿದ್ದ ಆರೋಪಿಗಳು, ಭದ್ರತಾ ಸಿಬ್ಬಂದಿ ಜೊತೆ ಜಗಳ ತೆಗದಿದ್ದರು. ಇದೇ ವೇಳೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಪ್ರಶ್ನಿಸಲು ಬಂದ ವೈದ್ಯರನ್ನು ಅವಾಚ್ಯ ಶಬ್ದಗಳಿಂದ ‌ನಿಂದಿಸಿದ್ದರು. ಆಸ್ಪತ್ರೆ ಆಸ್ತಿಗೂ ಹಾನಿ ಮಾಡಿದ್ದಾರೆ' ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು