ಬೆಂಗಳೂರು: ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ರೀಫಿಲ್ಲಿಂಗ್ ಮಾಡುತ್ತಿದ್ದ ಅಂಗಡಿ ಮತ್ತು ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಸುಮಾರು ₹4 ಲಕ್ಷ ಮೌಲ್ಯದ 80 ಗ್ಯಾಸ್ ಸಿಲಿಂಡರ್, ಮೂರು ರೀಫಿಲ್ಲಿಂಗ್ ರಾಡ್ ಹಾಗೂ ತೂಕದ ಯಂತ್ರ ಜಪ್ತಿ ಮಾಡಿದ್ದಾರೆ.

ಜಯನಗರ 1ನೇ ಬ್ಲಾಕ್ನ ಸೋಮೇಶ್ವರ ನಗರದ ಅಂಗಡಿ ಮತ್ತು ಗೋದಾಮಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿ ಚಿಕ್ಕ ಗ್ಯಾಸ್ ಸಿಲಿಂಡರ್ಗಳಿಗೆ ರೀಫಿಲ್ಲಿಂಗ್ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ಒಬ್ಬರು ಸಿಕ್ಕಿದ್ದು, ಮತ್ತಿಬ್ಬರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ನಡೆಸಲಾಗಿದೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.