ಗುರುವಾರ , ಏಪ್ರಿಲ್ 9, 2020
19 °C
ಸಂತ್ರಸ್ತೆಯನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ

ಬಾಡಿಗೆ ತಾಯಿ ಮೇಲೆ ಹಲ್ಲೆ; ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಮಗೆ ಹಣ ನೀಡಲಿಲ್ಲವೆಂಬ ಕಾರಣಕ್ಕೆ ಬಾಡಿಗೆ ತಾಯಿಯೊಬ್ಬರ ಹೊಟ್ಟೆಗೆ ಒದ್ದು ಹಲ್ಲೆ ಮಾಡಿ ಗರ್ಭಪಾತವಾಗಲು ಕಾರಣವಾಗಿರುವ ಆರು ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.

‘ಪ್ರಮೀಳಾ, ಪ್ರೇಮಾ, ರೀಟಾ, ಪೂಜಾ, ಆಶಾ ಹಾಗೂ ಮಂಜುನಾಥ್ ಬಂಧಿತರು. ಇವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಸದ್ಯ ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಮಕ್ಕಳಿಲ್ಲದ ದಂಪತಿ ಜೊತೆ ಬಾಡಿಗೆ ತಾಯಿಯಾಗಲು ಒಪ್ಪಂದ ಮಾಡಿಕೊಂಡಿದ್ದ 27 ವರ್ಷದ ಮಹಿಳೆ, ಬೇಗೂರು ಠಾಣೆ ವ್ಯಾಪ್ತಿಯ ಪೇಯಿಂಗ್ ಗೆಸ್ಟ್ ಕಟ್ಟಡವೊಂದರಲ್ಲಿ ಉಳಿದುಕೊಂಡಿದ್ದರು. ಹಣ ನೀಡುವಂತೆ ಒತ್ತಾಯಿಸಿ ಮಾ. 11ರಂದು ರಾತ್ರಿ ಕಟ್ಟಡಕ್ಕೆ ನುಗ್ಗಿದ್ದ ಆರೋಪಿಗಳು, ಮಹಿಳೆಯ ಹೊಟ್ಟೆಗೆ ಒದ್ದು ಹಲ್ಲೆ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.

ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ಹಲ್ಲೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಆಧರಿಸಿ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಸಂತ್ರಸ್ತೆಯನ್ನು ಸೋಮವಾರ ಭೇಟಿಯಾದ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು