ಭಾನುವಾರ, ಜೂಲೈ 5, 2020
27 °C

ರೌಡಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನು ಮೇಲೆ ಬಿಡುಗಡೆಯಾಗಿ ಬಂದಿದ್ದ ರೌಡಿ ಹಿದಾಯತ್ ಖಾನ್ ಎಂಬಾತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ತೀವ್ರ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯ ಲಗ್ಗೆರೆಯಲ್ಲಿ ಮಂಗಳವಾರ ಮಧ್ಯಾಹ್ನ 4.30ರ ಸುಮಾರಿಗೆ ಈ ಘಟನೆ ನಡೆದಿದೆ.

‘ಡಿ.ಜೆ.ಹಳ್ಳಿ ನಿವಾಸಿಯಾದ ಹಿದಾಯತ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಡಿ.ಜೆ.ಹಳ್ಳಿ ಠಾಣೆಯಲ್ಲೇ ಆತನ ವಿರುದ್ಧ ರೌಡಿ ಪಟ್ಟಿ ತೆರೆಯಲಾಗಿತ್ತು. ಹಳೆಯ ದ್ವೇಷದಿಂದಾಗಿ ಎದುರಾಳಿ ತಂಡದವರೇ ಆತನ ಮೇಲೆ ಹಲ್ಲೆ ಮಾಡಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.

‘ವಾಹನದಲ್ಲಿ ಬಂದಿದ್ದರು ಎನ್ನಲಾದ ನಾಲ್ವರು ದುಷ್ಕರ್ಮಿಗಳು, ಹಿದಾಯತ್ ಮೇಲೆ ಮನಬಂದಂತೆ ಮಾರಕಾಸ್ತ್ರ ಬೀಸಿದ್ದಾರೆ.  ಹಿದಾಯತ್‌ನ ಕೈ, ಕಾಲು ಹಾಗೂ ದೇಹದ ಹಲವೆಡೆ ಗಾಯಗಳಾಗಿವೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು