ಭಾನುವಾರ, ಜನವರಿ 26, 2020
30 °C

ಸಿಎಎ ಪರ ಹೋರಾಟದಲ್ಲಿ ಭಾಗಿಯಾಗಿದ್ದವನ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ‘ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತ ವರುಣ್‌ ಮೇಲೆ ಕೊಲೆ ಯತ್ನ ನಡೆಸಲಾಗಿದೆ’ ಎಂದು ಬಿಜೆಪಿ ಹೇಳಿದೆ. 

‘ವರುಣ್‌ ಅವರು ಜೆಪಿ ನಗರದ ತಮ್ಮ ನಿವಾಸಕ್ಕೆ ದ್ವಿಚಕ್ರದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಜೆ.ಸಿ. ರಸ್ತೆಯಲ್ಲಿ ಇಬ್ಬರು ಅಪರಿಚಿತರು ಚಾಕುವಿನಿಂದ ಚುಚ್ಚಿ ಕೊಲೆಗೆ ಯತ್ನಿಸಿದ್ದಾರೆ. ಪೊಲೀಸರು ಮತ್ತು ಸಾರ್ವಜನಿಕರ ನೆರವಿನಿಂದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಅದು ಹೇಳಿದೆ. ‌

‘ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವ್ಯಕ್ತಿ ಮೇಲೆ ಹರಿತವಾದ ಆಯುಧದೊಂದಿಗೆ ದಾಳಿ ನಡೆಸಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದಾಳಿ ಮಾಡಿದವರ ಗುರುತು ಪತ್ತೆಹಚ್ಚಲಾಗುತ್ತಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಬಿ.ರಮೇಶ್‌ ತಿಳಿಸಿದರು.

ಸ್ಥಳಕ್ಕೆ ಭೇಟಿಕೊಟ್ಟ ಸಂಸದ ತೇಜಸ್ವಿ ಸೂರ್ಯ, ವರುಣ್ ಆರೋಗ್ಯ ವಿಚಾರಿಸಿದರು. ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು