ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಪ್ರಕರಣದ ಆರೋಪಿ ಮೇಲೆ ಮಚ್ಚಿನಿಂದ ಹಲ್ಲೆ

Last Updated 1 ಮಾರ್ಚ್ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ಮಹದೇವಪುರ ಠಾಣೆ ವ್ಯಾಪ್ತಿಯಲ್ಲಿ ಲೋಕೇಶ್ ಅಲಿಯಾಸ್ ಲೋಕಿ ಎಂಬಾತನ ಮೇಲೆ ದುಷ್ಕರ್ಮಿಗಳು ಭಾನುವಾರ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

‘2018ರಲ್ಲಿ ನಡೆದಿದ್ದ ಅಜಯ್‌ ಎಂಬುವರ ಕೊಲೆ ಪ್ರಕರಣದ ಆರೋಪಿ ಆಗಿದ್ದ ಲೋಕಿ, ಜೈಲಿಗೆ ಹೋಗಿ ಜಾಮೀನು ಮೇಲೆ ಹೊರಗೆ ಬಂದಿದ್ದ. ಗಾಯಗೊಂಡಿರುವ ಆತನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಹಳೇ ವೈಷಮ್ಯವೇ ಇದಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT