ಬೆಂಗಳೂರು: ನಗರದಲ್ಲಿ ಶುಕ್ರವಾರ 42 ವರ್ಷದ ವಿಕಾಸ್ ಎಂಬುವರು ವಸತಿ ಕಟ್ಟಡದಿಂದ ಜಿಗಿಯಲು ಪ್ರಯತ್ನಿಸಿದ್ದು, ಪೊಲೀಸರು ಮತ್ತು ಸಾರ್ವಜನಿಕರು ಅವರನ್ನು ರಕ್ಷಿಸಿದ್ದಾರೆ.
ಮಧ್ಯಾಹ್ನ 1.45ರ ಸುಮಾರಿಗೆ ಎಚ್ಎಸ್ಆರ್ ಲೇಔಟ್‌ನ ಲ್ಲಿರುವ ನಾಲ್ಕು ಅಂತಸ್ತಿನ ಮನೆಯ ಮಹಡಿಯಿಂದ ಕೆಳಗೆ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮನವೊಲಿಸಲು ಪ್ರಯತ್ನಿಸಿದರು.
ಒಂದು ಗಂಟೆಗೂ ಹೆಚ್ಚು ಕಾಲ ವಿಕಾಸ್ ಅವರೊಂದಿಗೆ ಮಾತುಕತೆ ನಡೆಸಿ, ಮನವೊಲಿಸುವಲ್ಲಿ ಯಶಸ್ವಿಯಾದರು. ಎಚ್ಎಸ್ಆರ್ ಲೇಔಟ್ ಠಾಣೆಯ ಇಬ್ಬರು ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳು ಮತ್ತು ಕಾನ್‌ಸ್ಟೆಬಲ್‌ಗಳು ಹಾಗೂ ಸ್ಥಳೀಯರ ಸಹಾಯದಿಂದ ಮಧ್ಯಾಹ್ನ 3.15 ರ ಸುಮಾರಿಗೆ ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.