ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಆಭರಣ ಅಂಗಡಿ ಕಳ್ಳತನಕ್ಕೆ ಯತ್ನ

ಪೊಲೀಸ್ ವಾಹನದ ಸೈರನ್ ಶಬ್ಧ ಕೇಳಿ ಕಳ್ಳರು ಪರಾರಿ
Published : 8 ಸೆಪ್ಟೆಂಬರ್ 2024, 16:31 IST
Last Updated : 8 ಸೆಪ್ಟೆಂಬರ್ 2024, 16:31 IST
ಫಾಲೋ ಮಾಡಿ
Comments

ಬೆಂಗಳೂರು: ನಗರದ ಅವೆನ್ಯೂ ರಸ್ತೆಯಲ್ಲಿರುವ ಎರಡು ಚಿನ್ನದಂಗಡಿಗಳಲ್ಲಿ ಶನಿವಾರ ತಡರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದೆ.

ಏಳು ಜನರ ತಂಡ ಸಂಕೇಶ್ವರ ಜ್ಯೂವೆಲರ್ಸ್‌ ಹಾಗೂ ಧರ್ಮೇಶ್ ಜ್ಯೂವೆಲರ್ಸ್‌ನ ಶಟರ್‌ಗಳ ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿದೆ. ಬೀಗ ಒಡೆಯುವ ಶಬ್ದ ಕೇಳಿದ ಪಕ್ಕದ ಕಟ್ಟಡದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಹೊಯ್ಸಳ ವಾಹನದ ಸೈರನ್ ಶಬ್ಧ ಕೇಳುತ್ತಿದ್ದಂತೆ ಕಳ್ಳರು ಪರಾರಿಯಾಗಿದ್ದಾರೆ.

ಕಳ್ಳತನದ ದೃಶ್ಯಗಳು ಸೆರೆಯಾಗದಂತೆ ಆರೋಪಿಗಳು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಕ್ಯಾಮೆರಾದ ಕೇಬಲ್‌ಗಳನ್ನು ಕತ್ತರಿಸಿದ್ದಾರೆ. ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ - ಟೋಯಿಂಗ್ ವಾಹನ ಡಿಕ್ಕಿ:

ತುಮಕೂರು ರಸ್ತೆಯ 8ನೇ ಮೈಲಿ ಬಳಿ ಶನಿವಾರ ರಾತ್ರಿ ಕೆಎಸ್ಆರ್​ಟಿಸಿ ಬಸ್ ಹಾಗೂ ಟೋಯಿಂಗ್ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ.

ಟೋಯಿಂಗ್ ವಾಹನದ ಚಕ್ರ ಕಳಚಿ, ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರಿನಿಂದ ಹೊರಟಿದ್ದ ಕೆಎಸ್ಆರ್​ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿ ಹೆಚ್ಚು ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನಿಂದ ಗದ್ದಲ:

ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಶನಿವಾರ ರಾತ್ರಿ ಅರೆಬೆತ್ತಲೆಯಾಗಿ ನಡುರಸ್ತೆಯಲ್ಲಿ ನಿಂತ ಯುವಕನೊಬ್ಬ ವಾಹನ ಸವಾರರಿಗೆ ಕಿರಿಕಿರಿಯುಂಟು ಮಾಡಿದ್ದಾನೆ. ರಸ್ತೆಯಲ್ಲಿ ಬರುವ ವಾಹನಗಳನ್ನು ಅಡ್ಡ ಹಾಕಿ, ಸವಾರರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಯುವಕನ ಆಟಾಟೋಪಕ್ಕೆ ಬೇಸತ್ತ ವಾಹನ ಸವಾರರು ಕೊನೆಗೆ ಆತನನ್ನು ಆಟೊದಲ್ಲಿ ಕಳುಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT