ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಕಾರು ಅಡ್ಡಗಟ್ಟಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕಾರಿನ ವೈಪರ್ ಕಿತ್ತು ಹಾಕಿ, ಗಾಜು ಒಡೆದು ಹಾಕಿದ್ದಾರೆ. ಕಾರಿನಲ್ಲಿ ಮಗು ಇದೆ ಎಂದು ಹೇಳಿದರೂ ಆತ ಗಲಾಟೆ ಮುಂದುವರೆಸಿದ್ದಾನೆ. ಈ ದೃಶ್ಯವನ್ನು ಅವರು ಮೊಬೈಲ್‌ನಲ್ಲಿ ಸೆರೆ ಹಿಡಿದು, ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು, ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ಟ್ಯಾಗ್ ಮಾಡಿದ್ದರು.