ಭಾನುವಾರ, ಸೆಪ್ಟೆಂಬರ್ 19, 2021
23 °C

ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿ ಸಹಚರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಸ್ತಿನಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಆರೋಪದಡಿ ರೌಡಿಯೊಬ್ಬನ ಸಹಚರ ರಫೀಕ್ ಎಂಬಾತನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

‘ಶುಕ್ರವಾರ ರಾತ್ರಿ ನಡೆದಿರುವ ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ರೌಡಿ ಶಿವರಾಜ್ ಅಲಿಯಾಸ್ ಕುಳ್ಳ ತಲೆಮರೆಸಿಕೊಂಡಿದ್ದಾನೆ. ಆತನ ಸಹಚರನೇ ರಫೀಕ್’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಠಾಣೆ ವ್ಯಾಪ್ತಿಯ ಬಾರೊಂದರ ಬಳಿ ಗಲಾಟೆ ನಡೆಯುತ್ತಿತ್ತು. ರಾತ್ರಿ ಗಸ್ತಿನಲ್ಲಿದ್ದ ಪಿಎಸ್ಐ ಹಾಗೂ ಸಿಬ್ಬಂದಿ, ಸ್ಥಳಕ್ಕೆ ಹೋಗಿ ವಿಚಾರಿಸಿದ್ದರು. ಅದೇ ವೇಳೆಯೇ ಆರೋಪಿಗಳು, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರು’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು