ಅತ್ತಿಬೆಲೆ (ಆನೇಕಲ್): ಸಿಲಿಂಡರ್ ಬೆಲೆ ಏರಿಕೆ ನಿಯಂತ್ರಿಸಬೇಕು ಹಾಗೂ ಕನ್ನಡ ಶಾಲೆಗಳನ್ನು ಉಳಿಸಬೇಕೆಂದು ಅತ್ತಿಬೆಲೆ ಗಡಿ ಭಾಗದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷ ಮತ್ತು ಕನ್ನಡ ಜಾಗೃತಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಖಾಲಿ ಸಿಲಿಂಡರ್ ಹಾಗೂ ಪಾತ್ರೆಗಳ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಎಲ್ಪಿಜಿ ಸಿಲಿಂಡರ್ ಸಮಸ್ಯೆಯಿಂದ ಕರ್ನಾಟಕ ಜನತ ಪರದಾಡುವಂತಾಗಿದೆ. ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರ ಹುಡುಕಲು ಸಾಧ್ಯವಾಗಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಕನ್ನಡಿಗರ ಪರವಾಗಿ ನಿಲ್ಲಬೇಕಾಗಿದೆ. ಅಗತ್ಯ ಬೆಲೆ ಇಳಿಕೆಯಾಗದಿದ್ದರೆ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಆರು ಸಾವಿರ ಕನ್ನಡ ಶಾಲೆಗಳನ್ನು ರಾಜ್ಯದಲ್ಲಿ ಮುಚ್ಚಲಾಗಿದೆ. 30 ವರ್ಷಗಳಿಂದ ಕನ್ನಡ ಶಾಲೆಗಳಿಗೆ ಅನುದಾನ ಕೊಟ್ಟಿಲ್ಲ. ಕನ್ನಡ ಶಾಲೆಗಳ ಅಭಿವೃದ್ಧಿ ಮಾಡದಿರುವುದನ್ನು ಖಂಡಿಸಿ ಮುಖ್ಯಮಂತ್ರಿಗಳ ಮನೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು. ಬ್ಯಾಂಕ್ಗಳಲ್ಲಿ ಕನ್ನಡವಿಲ್ಲ, ಮೇಕೆದಾಟು, ಮಹದಾಯಿ, ಕೃಷ್ಣ ಮೇಲ್ದಂಡೆ, ಹಿಂದಿ ಹೇರಿಕೆ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಶ್ರಮಿಸಬೇಕು. ಅನ್ಯರಾಜ್ಯಗಳವರು ಹೆಚ್ಚಾಗುತ್ತಿರುವುದರಿಂದ ಕನ್ನಡಿಗರಿಗೆ ಉದ್ಯೋಗವಿಲ್ಲದಂತಾಗುತ್ತಿದೆ. ಉದ್ಯೋಗಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಮೀಸಲಾತಿ ದೊರೆಯುವಂತಾಗಬೇಕು ಎಂದರು.

ಕನ್ನಡ ಜಾಗೃತಿ ವೇದಿಕೆಯ ಮಂಜುನಾಥ ದೇವ, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್, ಗಿರೀಶ್ ಇದ್ದರು.

ವಾಹನ ದಟ್ಟಣೆ : ರಾಷ್ಟ್ರೀಯ ಹೆದ್ದಾರಿ 44ರ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ಆಯೋಜಿಸಿದ್ದ ಪ್ರತಿಭಟನೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ರಾಷ್ಟ್ರೀಯ ಹೆದ್ದಾರಿ ತಡೆ ಮಾಡಲು ಪ್ರತಿಭಟನಾಕಾರರು ಮುಂದಾದಗ ಪೊಲೀಸ್ ಇನ್ಸ್ಪೆಕ್ಟರ್ ಬಿ.ಎಸ್.ಮಂಜುನಾಥ್ ಅವರ ನೇತೃತ್ವದ ಸಿಬ್ಬಂದಿ ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.

ಕನ್ನಡದಲ್ಲಿ ರೈಲ್ವೆ ಪರೀಕ್ಷೆ: ಸಂಸದರ ಮನೆಗೆ ಮುತ್ತಿಗೆ

ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ನಡೆಯುವಂತಾಗಬೇಕು. ಸಂಸತ್ನಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಮಾತನಾಡದಿದ್ದರೆ ಸಂಸದ ಮನೆಗಳ ಮುತ್ತಿಗೆ ಹಾಕಲಾಗುವುದು. ಸಂಸದರು ಪ್ರಧಾನಿಯವರ ಮನೆ ಮುಂದೆ ಪ್ರತಿಭಟನೆ ನಡೆಸಿ ರಾಜ್ಯದ ಅನುದಾನಗಳು ಬೆಲೆ ಏರಿಕೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಕರ್ನಾಟಕದ ಸಂಸದರು ಕನ್ನಡದ ಬಗ್ಗೆ ಧ್ವನಿ ಎತ್ತಬೇಕೆಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.

ಕೈ ಮುಟ್ಟಿದ್ದಕ್ಕೆ ಗರಂ ಆದ ವಾಟಾಳ್

ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು ಈ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಅವರ ಕೈಯನ್ನು ಪೊಲೀಸರು ಹಿಡಿದ್ದರಿಂದ ವಾಟಾಳ್ ನಾಗರಾಜ್ ಪೊಲೀಸರ ಮೇಲೆ ಗರಂ ಆದರು. ‘ಖದೀಮರ ಕೈಗಳನ್ನು ಹಿಡಿದು ಎಳೆದು ಕೊಂಡು ರೂಢಿ ಆಗಿದೆ. ಆದರೆ ನಾನು ಖದೀಮನಲ್ಲ ಕನ್ನಡ ಪರ ಹೋರಾಟಗಾರ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.