ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ರಸ್ತೆ ವಿಭಜಕಕ್ಕೆ ಆಟೊ ಡಿಕ್ಕಿ: ಚಾಲಕ ಸಾವು

Published 9 ಮೇ 2024, 15:38 IST
Last Updated 9 ಮೇ 2024, 15:38 IST
ಅಕ್ಷರ ಗಾತ್ರ

ಬೆಂಗಳೂರು: ಗಿರಿನಗರ 80 ಅಡಿ ರಸ್ತೆಯಲ್ಲಿ ಬುಧವಾರ ರಾತ್ರಿ ಅಪಘಾತ ಸಂಭವಿಸಿದ್ದು, ಆಟೊ ಚಾಲಕ ಪೂಜಾರಿ ದೇವರಾಜ್ ನಾಯಕ್ (32) ಅವರು ಮೃತಪಟ್ಟಿದ್ದಾರೆ.

‘ಆಂಧ್ರಪ್ರದೇಶದ ದೇವರಾಜ್, ಹೊಸಕೆರೆ ಹಳ್ಳಿಯಲ್ಲಿ ವಾಸವಿದ್ದರು.  ದೇವರಾಜ್ ಅವರು ಹೊಸಕೆರೆಹಳ್ಳಿ ಕ್ರಾಸ್‌ನಿಂದ ಸೀತಾ ವೃತ್ತದ ಕಡೆಗೆ ಗಿರಿನಗರ 80 ಅಡಿ ರಸ್ತೆ ಮೂಲಕ ಆಟೊದಲ್ಲಿ ಹೊರಟಿದ್ದರು. ಮಾರ್ಗಮಧ್ಯೆ ನಿಯಂತ್ರಣ ತಪ್ಪಿದ್ದ ಆಟೊ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಆಟೊ ಉರುಳಿಬಿದ್ದು, ತೀವ್ರ ಗಾಯಗೊಂಡಿದ್ದ ದೇವರಾಜ್ ಅವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ’ ಎಂದು ಬಸವನಗುಡಿ ಸಂಚಾರ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT