ಬೆಂಗಳೂರು: ಹಣಕಾಸು ವಿಚಾರಕ್ಕೆ ನಡೆದ ಜಗಳದಲ್ಲಿ ಆಟೊ ಚಾಲಕನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕೆ.ಆರ್.ಪುರದ ಬಳಿಯ ಟಿ.ಸಿ.ಪಾಳ್ಯದಲ್ಲಿ ಭಾನುವಾರ ನಡೆದಿದೆ.

ಕೆ.ಆರ್.ಪುರದ ಬೋವಿ ಕಾಲೊನಿಯ ಕಿರಣ್ (25) ಕೊಲೆಯಾದ ಚಾಲಕ.

ಕೋಲಾರಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಯುವರಾಜ್ (28) ಮತ್ತು ಗಂಗರಾಜ್ನನ್ನು (26) ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ರಾಮಮೂರ್ತಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮದ್ಯವ್ಯಸನಿಯಾದ ಕಿರಣ್, ಭಾನುವಾರ ಬೆಳಗಿನ ಜಾವ ಟಿ.ಸಿ.ಪಾಳ್ಯದಲ್ಲಿ ಯುವರಾಜ್ ಮತ್ತು ಗಂಗರಾಜ್ನನ್ನು ಅಡ್ಡಗಟ್ಟಿ ಮದ್ಯಕ್ಕೆ ಹಣ ಕೊಡುವಂತೆ ಬೆದರಿಕೆ ಹಾಕಿದ್ದಾನೆ. ನಂತರ ಪರಸ್ಪರರ ಮಧ್ಯೆ ಹಣಕಾಸು ವಿಚಾರಕ್ಕೆ ಜಗಳವಾಗಿದೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ಯುವರಾಜ್ ಮತ್ತು ಗಂಗರಾಜ್ ಒಟ್ಟಾಗಿ ಕಿರಣ್ಗೆ ಹಿಗ್ಗಾಮುಗ್ಗಾ ಥಳಿಸಿ, ಕಬ್ಬಿಣದ ಸಲಾಕೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಮಾಡಿರುವ ದೃಶ್ಯಾವಳಿ ಘಟನಾ ಸ್ಥಳದ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಅಪರಾಧ ಹಿನ್ನೆಲೆಯುಳ್ಳ ಕಿರಣ್ ವಿರುದ್ಧ ಹಲ್ಲೆ, ಗಲಾಟೆ, ದೊಂಬಿ, ಬೆದರಿಕೆ ಸಂಬಂಧ ಕೆ.ಆರ್.ಪುರ ಹಾಗೂ ರಾಮಮೂರ್ತಿನಗರ ಠಾಣೆಯಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಅಲ್ಲದೆ, ಆತ ಬಂಧಿತನಾಗಿ ಜೈಲಿಗೂ ಹೋಗಿ ಬಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.