ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಆಟೊ ಚಾಲಕ ಮೋಹನ್ ಕುಮಾರ್ (37) ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ನಿವಾಸಿ ಮೋಹನ್, ಹಲವು ವರ್ಷಗಳಿಂದ ಆಟೊ ಚಾಲನೆ ಮಾಡುತ್ತಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಿದ್ದಾರೆ.
‘ಮಕ್ಕಳ ಶಾಲೆ ಶುಲ್ಕ ಭರಿಸುವುದಕ್ಕಾಗಿ ಮೋಹನ್ ಹಣ ಹೊಂದಿಸುತ್ತಿದ್ದರು. ಆದರೆ, ಹಣ ಸಿಕ್ಕಿರಲಿಲ್ಲ. ದುಡಿಮೆಯೂ ಕಡಿಮೆ ಆಗಿತ್ತು. ಇದರಿಂದ ನೊಂದ ಅವರು, ತಿಗಣೆ ಔಷಧಿ ಕುಡಿದು ಶನಿವಾರ ಆತ್ಮಹತ್ಯೆಗೆ ಯತ್ನಿಸಿದ್ದರು' ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.