ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಆಟೊ ಕದ್ದಿದ್ದ ಆರೋಪಿ ಬಂಧನ

Published 23 ಮೇ 2024, 14:34 IST
Last Updated 23 ಮೇ 2024, 14:34 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಿಲ್ಲಿಸಿದ್ದ ಆಟೊ ಕಳ್ಳತನ ಮಾಡಿದ್ದ ಆರೋಪಿ ನವೀದ್ ಉಲ್ಲಾ ಖುರೇಶಿ (30) ಎಂಬುವವರನ್ನು ಪುಲಕೇಶಿನಗರ ಠಾಣೆ ‍ಪೊಲೀಸರು ಬಂಧಿಸಿದ್ದಾರೆ.

‘ಪ್ರೇಜರ್ ಟೌನ್‌ನ ನವೀದ್, ಅಪರಾಧ ಹಿನ್ನೆಲೆಯುಳ್ಳವ. ಈತನ ವಿರುದ್ಧ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿದ್ದವು. ಈತನಿಂದ ₹2.45 ಲಕ್ಷ ಮೌಲ್ಯದ ಆಟೊ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿ, ಆಟೊ ಚಲಾಯಿಸಿಕೊಂಡು ಠಾಣೆ ವ್ಯಾಪ್ತಿಯಲ್ಲಿ ಹೊರಟಿದ್ದ. ಅನುಮಾನಗೊಂಡಿದ್ದ ಗಸ್ತಿನಲ್ಲಿದ್ದ ಸಿಬ್ಬಂದಿ, ಆಟೊ ತಡೆದು ಪರಿಶೀಲನೆ ನಡೆಸಿದ್ದರು. ಆರೋಪಿ ಆಟೊದ ದಾಖಲೆಗಳನ್ನು ತೋರಿಸಿರಲಿಲ್ಲ. ಆರೋಪಿಯನ್ನು ವಶಕ್ಕೆ ಪಡೆದಿದ್ದ ಸಿಬ್ಬಂದಿ ಠಾಣೆಗೆ ಕರೆತಂದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ.’

‘ಆಟೊವನ್ನು ಜಪ್ತಿ ಮಾಡಿ, ತನಿಖೆ ಮುಂದುವರಿಸಲಾಗಿತ್ತು. ಕೆಲ ದಿನಗಳ ಹಿಂದೆಯಷ್ಟೇ ಬೈಕ್‌ ಕದ್ದಿದ್ದ ಸಂಗತಿಯನ್ನೂ ಆರೋಪಿ ಬಾಯ್ಬಿಟ್ಟಿದ್ದ. ಬೈಕ್ ಸಹ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT