ಮಂಗಳವಾರ, ಏಪ್ರಿಲ್ 20, 2021
32 °C

ಅನುಪಮಾ, ಬಸವರಾಜ, ಮಂಜುನಾಥ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಎಚ್‌.ಎಸ್‌.ಅನುಪಮಾ, ಬಸವರಾಜ ಸಬರದ ಹಾಗೂ ಮಂಜುನಾಥ್ ಚಾಂದ್‌ ಅವರು ಡಾ.ಬರಗೂರು ಪ್ರತಿಷ್ಠಾನ ನೀಡುವ 2020ನೇ ಸಾಲಿನ ರಾಜಲಕ್ಷ್ಮಿ ಬರಗೂರು ಪುಸ್ತಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

‘ಅನುಪಮಾ ಅವರ ‘ಹೆಣ್ಣು ಹೆಜ್ಜೆ’ (ವಿಚಾರ ಸಾಹಿತ್ಯ), ಬಸವರಾಜ ಅವರ ‘ಬಯಲ ಬೆಳಕು’ (ವಿಮರ್ಶೆ) ಹಾಗೂ ಮಂಜುನಾಥ್ ಅವರ ‘ಕಾಡ ಸೆರಗಿನ ಸೂಡಿ’ (ಕಾದಂಬರಿ) ಕೃತಿಗಳು ಪ್ರಶಸ್ತಿಗೆ ಆಯ್ಕೆಯಾಗಿವೆ’ ಎಂದು ಪ್ರಕಟಣೆ ತಿಳಿಸಿದೆ. ಇದೇ 12ರಂದು ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪ್ರಶಸ್ತಿಯು ತಲಾ ₹10 ಸಾವಿರ ಮೊತ್ತ ಹಾಗೂ ಫಲಕವನ್ನು ಒಳಗೊಂಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು