ಶನಿವಾರ, ಏಪ್ರಿಲ್ 1, 2023
23 °C

ಪತ್ರಕರ್ತ ರುದ್ರಣ್ಣ ಹರ್ತಿಕೋಟೆಗೆ ರಾಷ್ಟ್ರೀಯ ಉತ್ಕೃಷ್ಟತಾ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವಿಜಯವಾಣಿ’ ದಿನಪತ್ರಿಕೆಯ ಸಹಾಯಕ ಸಂಪಾದಕ ರುದ್ರಣ್ಣ ಹರ್ತಿಕೋಟೆ ಅವರು ಭಾರತೀಯ ಪತ್ರಿಕಾ ಮಂಡಳಿಯ 2020ನೇ ಸಾಲಿನ ರಾಷ್ಟ್ರೀಯ ಉತ್ಕೃಷ್ಟತಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

2019ರ ಮೇ 22ರಂದು ‘ವಿಜಯವಾಣಿ’ ದಿನಪತ್ರಿಕೆಯ ಬೆಂಗಳೂರು ಆವೃತ್ತಿಯಲ್ಲಿ ಪ್ರಕಟವಾದ ಅವರ ‘ಕರ್ನಾಟಕದಲ್ಲಿ ಹವಾಮಾನ ಆಧಾರಿತ ಹೊಸ ಬೆಳೆ ನೀತಿ’ ಎಂಬ ವರದಿಯನ್ನು ಹಣಕಾಸು ವಿಭಾಗದ ವರದಿಗಾರಿಕೆ ವಿಭಾಗದಲ್ಲಿ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಫೆಬ್ರವರಿ→ 27ರಂದು →ನವದೆಹಲಿಯ ರಫಿ ಮಾರ್ಗದಲ್ಲಿರುವ →ಕಾನ್‌ಸ್ಟಿಟ್ಯೂಷನ್→ ಕ್ಲಬ್‌ ಆಫ್‌ →ಇಂಡಿಯಾದಲ್ಲಿ →ನಡೆಯಲಿರುವ →ಕಾರ್ಯಕ್ರಮದಲ್ಲಿ→ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷೆ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.