ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಇಎಸ್‌: ‘ಕ್ಯಾಂಪಸ್‌ ಚಾಲೆಂಜ್‌’ ಬಹುಮಾನ ವಿತರಣೆ

Published 8 ಮೇ 2024, 14:37 IST
Last Updated 8 ಮೇ 2024, 14:37 IST
ಅಕ್ಷರ ಗಾತ್ರ

ಬೆಂಗಳೂರು: ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ಇಲಾಖೆಯಿಂದ ಅಂತರ್‌ ವಿಭಾಗೀಯ ಕ್ರೀಡಾ ಉತ್ಸವ ‘ಕ್ಯಾಂಪಸ್‌ ಚಾಲೆಂಜ್‌’ ಹಮ್ಮಿಕೊಂಡಿದ್ದು, ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿ ನಿತೀಶ್‌ ಕೆ. ಮಾತನಾಡಿ, ‘ವಿದ್ಯಾರ್ಥಿಗಳು ವಿಶ್ವವಿದ್ಯಾಲಯಗಳಲ್ಲಿ ಕಲಿಯುವ ಮೂರು–ನಾಲ್ಕು ವರ್ಷಗಳೇ ಅವರ ಮುಂದಿನ 30 ರಿಂದ 40 ವರ್ಷಗಳ ಭವಿಷ್ಯವನ್ನು ನಿರ್ಧರಿಸುತ್ತದೆ’ ಎಂದು ತಿಳಿಸಿದರು.

ವಿವಿಧ ಕ್ರೀಡೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಎಂಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವಾಗಿ ₹10,000 ನಗದು ಮತ್ತು ಬಹುಮಾನ ನೀಡಿ ಗೌರವಿಸಲಾಯಿತು.

ಪಿಇಎಸ್‌ ವಿಶ್ವವಿದ್ಯಾಲಯದ ಕುಲಪತಿ ಜೆ. ಸೂರ್ಯಪ್ರಸಾದ್‌, ಕುಲಸಚಿವ ಕೆ.ಎಸ್‌. ಶ್ರೀಧರ್‌, ವಿದ್ಯಾರ್ಥಿ ವ್ಯವಹಾರಗಳ ಡೀನ್‌ ವಿ. ಕೃಷ್ಣ, ಕ್ರೀಡಾ ನಿರ್ದೇಶಕ ವಿನಯ್‌ ಎಂ.ಎಸ್‌. ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT