ಬೆಂಗಳೂರು: ‘ಮುನಿಸಿಪಾಲಿಕಾ-2023’ 17ನೇ ಅಂತರರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನದಲ್ಲಿ ಬೆಂಗಳೂರು ಜಲ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ‘ಬೆಸ್ಟ್ ಡೆಕೊರೇಟಿವ್’ ಪ್ರಶಸ್ತಿ ಪಡೆದುಕೊಂಡಿದೆ.

ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ, ಪೌರಾಡಳಿತ ನಿರ್ದೇಶನಾಲಯ, ಸ್ಥಳೀಯ ಸಂಸ್ಥೆಗಳು ಹಾಗೂ ಗುಡ್ ಗವರ್ನೆನ್ಸ್ ಇಂಡಿಯಾ ಫೌಂಡೇಷನ್ ವತಿಯಿಂದ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ, ಮಳೆ ನೀರು ಸಂಗ್ರಹ ವಿಧಾನದ ಬಗ್ಗೆ ಬಿಡಬ್ಲ್ಯುಎಸ್‌ಎಸ್‌ಬಿ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿತ್ತು.

ಪ್ರಾತ್ಯಕ್ಷಿಕೆ ಅತ್ಯುತ್ತಮ ಮಾದರಿಯಾಗಿದ್ದು, ಉತ್ತಮ ಪ್ರದರ್ಶನ, ಸಮಗ್ರ ಮಾಹಿತಿಯನ್ನು ಒಳಗೊಂಡಿದೆ ಎಂದು ಪ್ರಶಂಸಿಸಿ ಪ್ರಶಸ್ತಿ ನೀಡಲಾಗಿದೆ. ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ಎನ್. ಜಯರಾಮ್ ನೇತೃತ್ವದಲ್ಲಿ ಈ ಪ್ರಾತ್ಯಕ್ಷಿಕೆ ಸಿದ್ಧಪಡಿಸಲಾಗಿತ್ತು ಎಂದು ಮಂಡಳಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.