ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯುಮೋನಿಯಾ ಲಕ್ಷಣ ಇದ್ದರೆ ತಪಾಸಣೆ ಮಾಡಿಸಿ

ಕೊರೊನಾ ವೈರಸ್: ಆರೋಗ್ಯ ಇಲಾಖೆ ಸಲಹೆ
Last Updated 24 ಜನವರಿ 2020, 23:19 IST
ಅಕ್ಷರ ಗಾತ್ರ

ಬೆಂಗಳೂರು: ಚೀನಾದಲ್ಲಿ ಕಾಣಿಸಿಕೊಂಡಿರುವಕೊರೊನಾ ವೈರಸ್ ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ, ಈ ಸೋಂಕು ಹರಡುವುದನ್ನು ತಡೆಯಲು ಕೆಲವೊಂದು ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ನ್ಯುಮೋನಿಯಾ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದೆ.

ಅಲ್ಲಿನ ವುಹಾನ್‌ ನಗರದಲ್ಲಿಯೇ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ.

2019 ಡಿ.1ರಿಂದ ಯಾವುದೇ ಪ್ರಯಾಣಿಕರು ವುಹಾನ್ ನಗರಕ್ಕೆ ಭೇಟಿ ನೀಡಿ, ಮರಳಿದಲ್ಲಿ ವಿಮಾನ ನಿಲ್ದಾಣದಲ್ಲಿಯೇ ತಪಾಸಣೆ ಮಾಡಿ, ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತಿದೆ.ಈ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಇದನ್ನು ತಡೆಯಲು ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಇಲಾಖೆ ಮನವಿ ಮಾಡಿದೆ.

ನಗರದ ರಾಜೀವ್‌ ಗಾಂಧಿ ಎದೆ ರೋಗಗಳ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಮೀಸಲಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT