ಸ್ವಚ್ಛತಾ ಪಾಕ್ಷಿಕ ಜಾಗೃತಿ ಅಭಿಯಾನ

7
ರೈಲ್ವೆ ಇಲಾಖೆಯಿಂದ ಜಾಗೃತಿ ಅಭಿಯಾನ

ಸ್ವಚ್ಛತಾ ಪಾಕ್ಷಿಕ ಜಾಗೃತಿ ಅಭಿಯಾನ

Published:
Updated:
Deccan Herald

ಬೆಂಗಳೂರು: ‘ಸ್ವಚ್ಛತಾ ಹಿ ಸೇವಾ' ಪಾಕ್ಷಿಕ ಆಚರಣೆಗೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.

ರೈಲ್ವೆ ಇಲಾಖೆ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಿಬಿಎಂಪಿ ಪೌರ ಕಾರ್ಮಿಕರು ರೈಲು ನಿಲ್ದಾಣ ಸುತ್ತಮುತ್ತ ಮೆರವಣಿಗೆ ನಡೆಸಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿದರು. ನೈಋತ್ಯ ರೈಲ್ವೆ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್‌. ಸಕ್ಸೇನಾ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸ್ವಚ್ಛತೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಸ್ವಚ್ಛತೆ ಕುರಿತ ಬೀದಿ ನಾಟಕ ಪ್ರದರ್ಶಿಸಲಾಯಿತು. 
ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಈ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಡಿ 15 ದಿನಗಳ ಕಾಲ ಎಲ್ಲ ರೈಲು ನಿಲ್ದಾಣಗಳ ಸ್ವಚ್ಛತೆ ನಡೆಯಲಿದೆ. ಅ.2ರಂದು ಸಮಾರೋಪಗೊಳ್ಳಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !